ನಾಪೋಕ್ಲು, ಮೇ ೧೪: ಇಲ್ಲಿಗೆ ಸಮೀಪದ ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಗುರುವಾರ ವಿವಿಧ ಪೂಜಾ ವಿಧಿವಿಧಾನಗಳು ಜರುಗಿದವು.
ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಬುಧವಾರ ಹೋಮ ಹವನಗಳು ಪ್ರಾರಂಭಗೊAಡವು. ಗುರುವಾರ ಬೆಳಿಗ್ಗೆ ಗಣಪತಿ ಹೋಮ, ಅಂಕುರ ಪೂಜೆ, ಬಿಂಬಶುದ್ಧಿ, ಕಳಶ ಪೂಜೆ ಕಲಶಾಭಿಷೇಕ ಪ್ರಾಯಶ್ಚಿತ ಹೋಮಗಳು ನಡೆದು ಮಧ್ಯಾಹ್ನ ವಿಶೇಷ ಪೂಜೆ. ಪ್ರಸಾದ ವಿತರಣೆ ನೆರವೇರಿತು. ಬಳಿಕ ರಾತ್ರಿ ಅಂಕುರ ಪೂಜೆ ಹಾಗೂ ದುರ್ಗಾ ನಮಸ್ಕಾರ ಪೂಜೆಗಳು ನೆರವೇರಿದವು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ, ಹಾಲಿ ಹಾಗೂ ಮಾಜಿ ಪದಾಧಿಕಾರಿಗಳ ಹಾಗೂ ಸದಸ್ಯರು, ಭಕ್ತ ಜನ ಸಂಘದ ಅಧ್ಯಕ್ಷ ಸುಮನ್ ಸುಬ್ರಮಣಿ, ಹಾಲಿ ಹಾಗೂ ಮಾಜಿ ಪದಾಧಿಕಾರಿಗಳು ಹಾಗೂ ಸದಸ್ಯರು, ಭಕ್ತಾದಿಗಳು ಭಾಗವಹಿಸಿದ್ದರು. ತಾ. ೧೫ ರಂದು (ಇಂದು) ಬೆಳಿಗ್ಗೆ ೭ ಗಂಟೆಗೆ ಗಣಪತಿ ಹೋಮ ಅಂಕುರ ಪೂಜೆ, ಶಾಂತಿ ಹೋಮ, ಕಲಶಾಭಿಷೇಕ ನಡೆಯಲಿದ್ದು ಮಧ್ಯಾಹ್ನ ಪೂಜೆ ಹಾಗೂ ರಾತ್ರಿ ಅಂಕುರ ಪೂಜೆ, ದುರ್ಗಾ ನಮಸ್ಕಾರ ಪೂಜೆಗಳು ನಡೆಯಲಿವೆ. - ದುಗ್ಗಳ ಸದಾನಂದ