ಮಡಿಕೇರಿ, ಮೇ ೧೬: ಕೊಡವ ಭಾಷಿಕ ಸಮುದಾಯಗಳ ಕೂಟದ ಆಶ್ರಯದಲ್ಲಿ ಮೂರ್ನಾಡಿನ ಲಾಲೂ ಮುದ್ದಯ್ಯ ಪಿ.ಯು. ಕಾಲೇಜಿನ ಆಟದ ಮೈದಾನದಲ್ಲಿ ನಡೆಯುತ್ತಿರುವ ೨೧ ಕೊಡವ ಭಾಷಿಕ ಜನಾಂಗದ ಕ್ರೀಡಾಕೂಟದ ಸಮಾರೋಪ ಸಮಾರಂಭ ತಾ. ೧೭ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.
ಇಂದು ಬೆಳಿಗ್ಗೆ ೮ ಗಂಟೆಗೆ ಜನಾಂಗ ಬಾಂಧವರಿಗಾಗಿ ಮೆರಥಾನ್ ನಡೆಯಲಿದ್ದು, ೯ ಗಂಟೆಗೆ ಕ್ರಿಕೆಟ್ ಸೆಮಿಫೈನಲ್ ನಡೆಯಲಿದ್ದು, ಬಳಿಕ ಫೈನಲ್ ಪಂದ್ಯಾಟದ ನಂತರ ಹಗ್ಗಜಗ್ಗಾಟದ ಅಂತಿಮ ಹಣಾಹಣಿ ನಡೆಯಲಿದೆ. ಬಳಿಕ ೧೧ ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೂಟದ ಅಧ್ಯಕ್ಷ ಡಾ. ಮೇಚಿರ ಸುಭಾಷ್ ನಾಣಯ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಕೊಡಗು - ಮೈಸೂರು ಸಂಸದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಪೊಲೀಸ್ ನಿರೀಕ್ಷಕ ತುದಿಮಾಡ ಸವಿ ಲೋಕೇಶ್, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ, ವೀರಾಜಪೇಟೆ ಕೊಡವ ಸಮಾಜದ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್ ಹಾಗೂ ಕಾಫಿ ಬೆಳೆಗಾರ, ಸಮಾಜ ಸೇವಕ ಕೂಡಂಡ ರಾಜೇಂದ್ರ ಅಯ್ಯಮ್ಮ ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ೨೧ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.