ಮಡಿಕೇರಿ, ಮೇ ೧೭: ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಸರ್ಕಾರಿ ವಸ್ತುಸಂಗ್ರಹಾಲಯ, ಮಡಿಕೇರಿಯಲ್ಲಿ ತಾ. ೧೮ ರಂದು (ಇಂದು) ಬೆಳಿಗ್ಗೆ ೯.೪೫ ಗಂಟೆಗೆ ಅಂತರರಾಷ್ಟಿçÃಯ ವಸ್ತು ಸಂಗ್ರಹಾಲಯ ದಿನಾಚರಣೆ ಕಾರ್ಯಕ್ರಮವನ್ನು ‘ವಸ್ತು ಸಂಗ್ರಹಾಲಯಗಳು ವಿಭಜಿತ ಜಗತ್ತನ್ನು ಒಂದುಗೂಡಿಸುತ್ತಿವೆ ಎಂಬ ಘೋಷವಾಕ್ಯದಡಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಕೊಡಗಿನ ಖ್ಯಾತ ವೈದ್ಯರು ಹಾಗೂ ನಾಣ್ಯ ಸಂಗ್ರಹಕಾರರಾದ ಡಾ. ಎಂ.ಜಿ. ಪಾಟ್ಕರ್ ಅವರ ಸಂಗ್ರಹದ ನಾಣ್ಯಗಳ ಪ್ರದರ್ಶನವನ್ನು ಸರ್ಕಾರಿ ವಸ್ತು ಸಂಗ್ರಹಾಲಯದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಉದ್ಘಾಟಿಸಲಿದ್ದಾರೆ ಎಂದು ಸರ್ಕಾರಿ ವಸ್ತು ಸಂಗ್ರಹಾಲಯದ ಕ್ಯೂರೇಟರ್ ಬಿ.ಪಿ. ರೇಖಾ ತಿಳಿಸಿದ್ದಾರೆ.