ಚೆಯ್ಯAಡಾಣೆ, ಮೇ ೧೭: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಬಿ.ಸಿ. ಟ್ರಸ್ಟ್ ವತಿಯಿಂದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಕೇರಿ ಗ್ರಾಮದ ಕಾವೇರಿ ಕುಟುಂಬಕ್ಕೆ ವಾತ್ಸಲ್ಯ ಮನೆ ಹಸ್ತಾಂತರಿಸಲಾಯಿತು. ನರಿಯಂದಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಾತ್ಸಲ್ಯ ಮನೆ ಉದ್ಘಾಟಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಠಲ್ ಸಾಲಿಯಾನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನಾಧಿಕಾರಿ ಪುರುಷೋತ್ತಮ್ ಮಾತನಾಡಿದರು. ಈ ಸಂದರ್ಭ ನರಿಯಂದಡ ಒಕ್ಕೂಟದ ಅಧ್ಯಕ್ಷೆ ಮಾಚಮ್ಮ, ಭಾಗಮಂಡಲ ವಲಯದ ಮೇಲ್ವಿಚಾರಕ ಸುನೀಲ್ ಕುಮಾರ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಮಾಲಿನಿ, ಸೇವಾಪ್ರತಿನಿಧಿ ಪ್ರಭಾ, ಸಂಘದ ಸದಸ್ಯರು ಉಪಸ್ಥಿತರಿದ್ದರು.