ಮಡಿಕೇರಿ, ಮೇ ೧೭: ಶಾಸಕರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ವಿವಿಧ ಮುಖಂಡರು ಸನ್ಮಾನಿಸಿದರು.
ಮಡಿಕೇರಿ ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷ ವಿ.ಜಿ. ಮೋಹನ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಜಿಲ್ಲಾ ವಕ್ತಾರ ತೆನ್ನಿರ ಮೈನ, ಅಕ್ರಮ ಸಕ್ರಮ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ, ಪ್ರಮುಖರಾದ ರೂಪ ಸುಬ್ಬಯ್ಯ, ಲತೀಫ್ ಸುಂಟಿಕೊಪ್ಪ, ಉಳುವಾರನ ಪವಿತ್ರ. ಪೀಟರ್, ಖಲೀಲ್ ಪಾಷ, ಚಂದ್ರಶೇಖರ್, ಸದಾ ಮುದ್ದಪ್ಪ, ಸುಬ್ರಮಣಿ, ಮುದ್ದುರಾಜು, ಶರಣು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.