ಮಡಿಕೇರಿ, ಮೇ.೨೧: ಪ್ರಸಕ್ತ(೨೦೨೬-೨೭) ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮೊ ಕೋರ್ಸ್ ಕಲಿಕೆಗಾಗಿ ೩೯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ- ಗದಗ-ಬೆಟಗೇರಿ(ಕರ್ನಾಟಕ)(೨೨ ಅಭ್ಯರ್ಥಿಗಳು), ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-ಸೇಲA(ತಮಿಳುನಾಡು) ೧೨ ಅಭ್ಯರ್ಥಿಗಳು, ಎಸ್ಪಿಕೆಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-ವೆAಕಟಗಿರಿ(ನೆಲ್ಲೂರು ಜಿಲ್ಲೆ, ಆಂದ್ರಪ್ರದೇಶ) ೦೩ ಅಭ್ಯರ್ಥಿಗಳು ಹಾಗೂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-ಕಣ್ಣೂರು(ಕೇರಳ) (೦೨ ಅಭ್ಯರ್ಥಿಗಳು) ಈ ಸಂಸ್ಥೆಗಳಿAದ ಅರ್ಜಿ ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.೨,೫೦೦ ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ೨೦೨೬ರ ಜುಲೈ ೧ ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ೧೫ ರಿಂದ ೨೩ ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ೧೫ ರಿಂದ ೨೫ ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರ ವಾಗಿರುತ್ತದೆ. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾಯ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿ ಫಾರಂಗಳಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ಮೊ.ಸಂ.೯೯೧೬೧೪೩೬೧೯ ಅಥವಾ ಆಯಾಯ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ(ಡಿಐಸಿ), ಕೊಹಿನೂರು ರಸ್ತೆ, ಮಡಿಕೇರಿ ದೂ.ಸಂ.೦೮೨೭೨-೨೨೦೩೬೫ ಅನ್ನು ಸಂಪರ್ಕಿಸಬಹುದು.
ಅರ್ಜಿಯನ್ನು ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ hಣಣಠಿs://ಞhಣigಚಿಜಚಿg.ಚಿಛಿ.iಟಿ/ಂಜmissioಟಿಈoಡಿm.ಠಿಜಜಿ ಪೂರ್ಣ ವಾಗಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-೫೮೨೧೦೨ ಇವರಿಗೆ ಸಲ್ಲಿಸಲು ತಾ.೨೭ ಕೊನೆಯ ದಿನವಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ತಿಳಿಸಿದ್ದಾರೆ.