ವೀರಾಜಪೇಟೆ, ಮೇ.೨೧: ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಾಗೂ ಕಲ್ಲಿನ ಆನೆಯೊಂದು ದೇವಸ್ಥಾನಕ್ಕೆ ಮುಖ ಮಾಡಿ ನಿಂತಿರುವ ದಕ್ಷಿಣ ಭಾರತದ ಏಕೈಕ ದೇವಸ್ಥಾನ ಎಂಬ ಹಿನ್ನೆಲೆ ಇರುವ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೇಡು ಹಬ್ಬ ಶ್ರದ್ಧಾಭಕ್ತಿಯಿಂದ ಸಂಪನ್ನಗೊAಡಿತು.
ಊರು ತಕ್ಕರಾದ ಚಮ್ಮಟ್ಟಿರ ಕುಟುಂಬದ ಐನ್‌ಮನೆಯಿಂದ ಮೂಲ ನಿವಾಸಿಗಳಲ್ಲಿ ಒಬ್ಬರಾದ ಪಣಿಕ ಜನಾಂಗದಿAದ ಪೊಲವಂದೆರೆ ಹೊರಡುವ ಮೂಲಕ ಎರಡು ದಿನಗಳ ಹಬ್ಬಕ್ಕೆ ಚಾಲನೆ ದೊರೆಯಿತು. ನಂತರ ಊರಿನ ಮೂರು ನಿಗಧಿತ ದೇವ ನೆಲೆಗಳಾದ ಮಚ್ಚಿಯಂಡ, ಚೇಂದ್ರಿಮಾಡ ಹಾಗೂ ಕೊಕ್ಕಂಡ ಕುಟುಂಬಗಳ ಅಂಬಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪೊಲವಪ್ಪಂಡ ಕೋಟದಲ್ಲಿ (ದೇವಸ್ಥಾನ)ದಲ್ಲಿ ಸೇರಲಾಯಿತು.
ಬಳಿಕ ಜೋಡುಬೀಟಿಯಲ್ಲಿರುವ ಗುಂಡಿಯತ್ ಅಯ್ಯಪ್ಪ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹರಕೆ ಒಪ್ಪಿಸಲಾಯಿತು. ವಿಶೇಷ ಪೂಜೆಯ ನಂತರ ಹರಕೆ ಎಂಬAತೆ ಸಾವಿರಾರು ತೆಂಗಿನಕಾಯಿಗಳನ್ನು ಈಡುಕಾಯಿ ರೂಪದಲ್ಲಿ ಭಕ್ತರು ಒಡೆದು ಹರಕೆ ತಿರಿಸಿಕೊಂಡರು. ತಮ್ಮ ಮನೆಯ ಸಾಕು ನಾಯಿಗಳಿಗೆ ತೊಂದರೆಯಾಗದAತೆ ಬೋಟೆಕಾರ ರೂಪದಲ್ಲಿ ಮಣ್ಣಿನ ನಾಯಿಯನ್ನು ಒಪ್ಪಿಸಲಾಯಿತು.
ನಂತರ ಇಲ್ಲಿಂದ ಹೊರಟು ನಿಗಧಿತ ಜಾಗದಲ್ಲಿ ತೆಂಗಿನ ಕಾಯಿ, ಬಾಳೆಹಣ್ಣು ತಿನ್ನುವ ಮೂಲಕ ಪೂಜಾರಿಗಳು ಉಪವಾಸವನ್ನು ಅಂತ್ಯಗೊಳಿಸಿ, ಮೂಕಳೇರ ಬಲ್ಯಮನೆಯಲ್ಲಿ ಸಾಮೂಹಿಕ ಭೋಜನ ಮಾಡಿ ಚಮ್ಮಟೀರ ಬಲ್ಯ ಮನೆಗೆ ತೆರಳಿ ವಿವಿಧ ವೇಷಗಳಲ್ಲಿ ದೇವರ ಕಳಿ ಹಾಕಿ ಮನೆ ಮನೆಗೆ ಕಳಿ ಹೊರಟಿತು.
ಬೇಡು ಹಬ್ಬದ ಎರಡನೇ ದಿನ ಚಮ್ಮಟೀರ ಹಾಗೂ ಮೂಕಳೇರ ಮನೆಯಿಂದ ಒಂದೊAದು ಕುದುರೆ, ಮೊಗವನ್ನು ಶೃಂಗರಿಸಿ ಅದನ್ನು ಹೊತ್ತು ಊರಿನ ಶ್ರೀ ಭದ್ರಕಾಳಿ ದೇವಸ್ಥಾನದ ಹತ್ತಿರದ ಅಂಬಲದಲ್ಲಿ ಸೇರಿ, ಎರಡು ಕಡೆಯಿಂದ ತಲಾ ಒಂದೊAದು ಕುದುರೆ (ಕೃತಕವಾಗಿ ತಯಾರಿಸಿದ್ದು) ಹಾಗೂ ಮೊಗ ಮುಖಾಮುಖಿ ಆಗುತ್ತಿದ್ದಂತೆ ಊರಿನವರು ಪರಸ್ಪರ ಆಲಂಗಿಸಿಕೊAಡು ಅಂಬಲದ ಸಮೀಪದ ದೇವರ ಕೆರೆಯಿಂದ ಕೆಸರನ್ನು ತಂದು ಪರಸ್ಪರ ಕೆಸರು ಎರಚಾಡಿಕೊಂಡು ಸಂಭ್ರಮಿಸಿ ದೇವರ ಹಬ್ಬ ಆಚರಣೆ ಮಾಡಿದರು.
ಹಿರಿಯರು ಕಿರಿಯರು ಮಕ್ಕಳು ಎಂಬ ಭೇದವಿಲ್ಲದೆ ಪರಸ್ಪರ ಕೆಸರು ಎರಚಾಡಿ ಆಲಂಗಿಸಿಕೊಳ್ಳುತ್ತಾರೆ. ಇಲ್ಲಿ ಹೆಂಗಸರಿಗೆ ಹಾಗೂ ಪರ ಊರಿನವರಿಗೆ ಹಾಗೂ ನೆಂಟರಿಗೆ ಕೆಸರು ಎರಚುವಂತಿಲ್ಲ. ಆದರೆ ಪರ ಊರಿನವರಿಗೆ ಹಾಗೂ ನೆಂಟರಿಗೆ ಮುಕ್ತವಾಗಿ ಇಲ್ಲಿ ಸಂಭ್ರಮಿಸಲು ಅವಕಾಶವಿದ್ದು ಅಂತಹವರಿಗೆ ಒಂದೊAದು ಬೆತ್ತದ ಕೋಲು ನೀಡಲಾಗುತ್ತದೆ. ಆ ಕೋಲು ಹಿಡಿದವರಿಗೆ ಕೆಸರು ಎರಚುವಂತಿಲ್ಲ ನಂತರ ಭದ್ರಕಾಳಿ ದೇವಸ್ಥಾನದಲ್ಲಿ ಸೇರಿ ಮೂರು ಸುತ್ತು ಬಂದು ಕಾಣಿಕೆ ಹಾಕಿ ವಿಶೇಷ ಪೂಜೆಯ ಬಳಿಕ ಹಬ್ಬಕ್ಕೆ ತೆರೆ ಎಳೆಯಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ, ತಕ್ಕ ಮಖ್ಯಸ್ಥರಾದ ಚಮ್ಮಟೀರ ಪ್ರವೀಣ್ ಉತ್ತಪ್ಪ ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು, ಗ್ರಾಮದ ಪ್ರಮುಖ ಕುಟುಂಬದವರು ಹಾಜರಿದ್ದು ದೇವರ ಕೃಪೆಗೆ ಪಾತ್ರರಾದರು.