ಸಿದ್ದಾಪುರ, ಮೇ.೨೧: ಶಾಸಕ ಡಾ.ಮಂತರ್ ಗೌಡ ಅವರು ನೆಲ್ಯಹುದಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆಗಳಿಗೆ ತಲುಪುವಂತೆ ಮಾಡಿ ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡಿ ಅಭಿವೃದ್ಧಿಯೊಂದಿಗೆ ಸ್ವಾವಲಂಬಿ ಜೀವನ ನಡೆಸಲು ಎಲ್ಲ ರೀತಿಯ ಯೋಜನೆಗಳನ್ನು ನೀಡುತ್ತಿದೆ. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬಂದಲ್ಲಿ ನಮ್ಮ ರಾಜ್ಯ ಪ್ರಗತಿಯತ್ತ ಸಾಗಲಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವುದು ನಮ್ಮ ಕರ್ತವ್ಯವಾಗಿದ್ದು ಹಲವು ವರ್ಷಗಳಿಂದಲೂ ಅಭಿವೃದ್ಧಿ ಕಾಣದೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದ ಜನರಿಗೆ ಇದೀಗ ಅಭಿವೃದ್ಧಿ ಭಾಗ್ಯ ದೊರೆತಂತಾಗಿದೆ ಎಂದರು.

ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಬು ವಾರ್ಗೀಸ್ ಮಾತನಾಡಿ, ಹಲವು ವರ್ಷಗಳಿಂದಲೂ ಪ್ರಮುಖ ರಸ್ತೆಗಳು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ನಡೆಯದೆ ಈ ಭಾಗದ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಶಾಸಕ ಮಂತರ್ ಗೌಡ ಅವರು ಚುನಾವಣೆ ಸಂದರ್ಭದಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದರು.

ಇದೀಗ ನುಡಿದಂತೆ ನಡೆದುಕೊಂಡು ಇದುವರೆಗೂ ಅಂದಾಜು ರೂ.೭ ಕೋಟಿ ವೆಚ್ಚದಲ್ಲಿ ವಿದ್ಯುತ್ ಸಮಸ್ಯೆ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ, ಕಿರು ಸೇತುವೆ, ತಡೆಗೋಡೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಬಹುತೇಕ ನಡೆದಿದ್ದು ಮತ್ತಷ್ಟು ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಗ್ರಾಮದಲ್ಲಿ ಮತ್ತಷ್ಟು ಸಮಸ್ಯೆಗಳಿದ್ದು ಬಗೆಹರಿಸಿಕೊಡಬೇಕೆಂದು ಮನವಿ ಮಾಡಿದರು

ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ ಶಶಿಧರ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಎಂ.ಕೆ ಹಕಿಂ, ಧನಲಕ್ಷಿö್ಮ, ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ ಸೈಯದ್ ಬಾವ, ಅಭಿವೃದ್ಧಿ ಅಧಿಕಾರಿ ನಂಜುAಡಸ್ವಾಮಿ, ಚೆಸ್ಕಾಂ ಇಲಾಖೆಯ ಮಂಜುನಾಥ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಸುನಿತಾ ಮಂಜುನಾಥ್, ಕಾಂಗ್ರೆಸ್ ಜಿಲ್ಲಾ ಸಮಿತಿ ಸದಸ್ಯ ಕೆ.ಎಂ ಬಶೀರ್, ಜೋಸೆಫ್ ಶ್ಯಾಮ್, ಪ್ರಮುಖರಾದ ಎಸ್ ದೂಲ್ ಪಾಡಿ, ಮುಸ್ತಫ, ಅನಿಫ್, ವಸಂತ್ ಕುಮಾರ್ ಹೊಸ ಮನೆ, ಪ್ರಮೀಳಾ, ಕೆ.ಎಂ ಮುಸ್ತಫ, ಅಪ್ಸಲ್, ಸಿಹಾಬ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಪಂಚಾಯಿತಿ ಮಾಜಿ ಸದಸ್ಯರಗಳು ಹಾಜರಿದ್ದರು.