ಮಡಿಕೇರಿ, ಮೇ ೨೨: ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ವತಿಯಿಂದ ನಗರದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿಗೆ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಶ್ರೀ ಕೋಟೆ ಮಹಾಗಣಪತಿ ದೇವರಿಗೆ ಅಭಿಷೇಕ, ೧೨ ತೆಂಗಿನ ಕಾಯಿಯ ಗಣ ಹೋಮ, ೧೦ ಸಹಸ್ರ ದುರ್ವಾಂಕುರ ಸಮರ್ಪಣೆ, ಒಂದು ಸಹಸ್ರ ಎಕ್ಕ ಸಮರ್ಪಣೆ ನಂತರ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ನಗರಸಭೆ ಅಧ್ಯಕ್ಷೆ ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಉದ್ಯಮಿ ಅವರೆಮಾದಂಡ ಶರಣು ಸೇರಿದಂತೆ ಇನ್ನಿತರ ಪ್ರಮುಖರು ಪೂಜೆಯಲ್ಲಿ ಭಾಗವಹಿಸಿದ್ದರು.