ಮಡಿಕೇರಿ, ಮೇ ೨೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ಜಿಲ್ಲಾ ಹಾಪ್‌ಕಾಮ್ಸ್ ವತಿಯಿಂದ ನಗರದ ಹಾಪ್ ಕಾಮ್ಸ್ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುವ ೬ನೇ ವರ್ಷದ ಮಾವು ಮತ್ತು ಹಲಸು ಮೇಳಕ್ಕೆ ಶಾಸಕ ಡಾ. ಮಂತರ್ ಗೌಡ ಅವರು ಮಾವು ಸವಿಯುವ ಮೂಲಕ ಶುಕ್ರವಾರ ಚಾಲನೆ ನೀಡಿದರು.

ಈ ಸಂದರ್ಭ ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಮಡಿಕೇರಿ ಹಾಪ್ ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಉಪಾಧ್ಯಕ್ಷ ಮಲ್ಲಂಡ ಮಧು ದೇವಯ್ಯ, ನಿರ್ದೇಶಕರಾದ ನಾಗೇಶ್ ಕುಂದಲ್ಪಾಡಿ, ಎಸ್.ಪಿ. ಪೊನ್ನಪ್ಪ, ಬೇಬಿ ಪೂವಯ್ಯ, ಚಟ್ರಂಡ ಲೀಲಾ ಮೇದಪ್ಪ, ಕೆ.ಎಂ. ಮನೋಹರ್, ಸುವಿನ್ ಗಣಪತಿ, ಮನು ಮಹೇಶ್, ಪೂವಪ್ಪ ನಾಯ್ಕ, ಉಮೇಶ್ ರಾಜಾ ಅರಸ್, ಸುದೀರ್, ಕಾಂಗೀರ ಸತೀಶ್, ಬಿ.ಎ. ಹರೀಶ್, ನಗರಸಭಾ ಸದಸ್ಯ ಸತೀಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಹೆಚ್. ಶಶಿಧರ, ಹಾಪ್ ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಮುತ್ತಪ್ಪ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪಣೀಂದ್ರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇಷ್ಮ, ಇತರರು ಇದ್ದರು.

ಕೊಡಗು ಜಿಲ್ಲೆಯಲ್ಲಿ ಬಹು ಬೆಳೆ ಬೆಳೆಯಲಾಗುತ್ತದೆ. ಕೊಡಗು ಜಿಲ್ಲೆಯಲ್ಲಿ ಕಾಫಿ, ಏಲಕ್ಕಿ, ಕರಿಮೆಣಸು ಹಾಗೆಯೇ ಕಾಡು ಮಾವು, ಇತ್ತೀಚೆಗೆ ಅಡಿಕೆ, ಬಟರ್‌ಫ್ರೂಟ್ ಬೆಳೆ ಬೆಳೆಯಲಾಗುತ್ತಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವುದರಿಂದ ಪರ್ಯಾಯ ಬೆಳೆಯತ್ತ ಗಮನಹರಿಸಬೇಕು ಎಂದು ಸಲಹೆ ಮಾಡಿದರು.

ಮಾದಾಪುರದಲ್ಲಿ ತೋಟಗಾರಿಕೆ ಇಲಾಖೆ ವ್ಯಾಪ್ತಿಯ ೧೦೦ ಎಕರೆ ಜಾಗವಿದ್ದು, ಗುತ್ತಿಗೆ ಆಧಾರದಲ್ಲಿ ಕೃಷಿಕರಿಗೆ ಜಮೀನು ನೀಡಿದರೆ ಹೆಚ್ಚಿನ ಆದಾಯ ಬರಲಿದೆ ಎಂದು ಇದೇ ಸಂದಭ ಸಲಹೆ ಮಾಡಿದರು.

ಮಾವು ಮತ್ತು ಹಲಸು ಬೆಳೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಾವು ಬೆಳೆಗಾರರಿಂದ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಇದೇ ಸಂದರ್ಭ ಡಾ. ಮಂತರ್ ಗೌಡ ಅವರು ತಿಳಿಸಿದರು.