*ಗೋಣಿಕೊಪ್ಪ, ಮೇ ೨೨: ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ಎರಡರಂದು ಭೇಟಿ ನೀಡಲಿದ್ದಾರೆ ಎಂದು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಮಾಹಿತಿ ನೀಡಿದ್ದಾರೆ.
ಪೊನ್ನಂಪೇಟೆಯಲ್ಲಿ ನಡೆದ ಪೂರ್ವಭಾವಿ ತಯಾರಿ ಸಭೆಯಲ್ಲಿ ಮಾತನಾಡಿ, ಗೋಣಿಕೊಪ್ಪದಲ್ಲಿ ಹಕ್ಕುಪತ್ರ, ಬಸ್ ನಿಲ್ದಾಣ, ವಿವಿಧ ಕಾಮಗಾರಿಗಳ ಉದ್ಘಾಟನೆ, ಬೃಹತ್ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪೊನ್ನಂಪೇಟೆ ಬ್ಲಾಕ್‌ನ ವಲಯ ಅಧ್ಯಕ್ಷರುಗಳ ಹಾಗೂ ಪ್ರಮುಖರ ಸಭೆಯನ್ನು ನಡೆಸಿ, ಮುಖ್ಯಮಂತ್ರಿಗಳ ಕಾರ್ಯಕ್ರಮದ ರೂಪುರೇಷೆ ಹಾಗೂ ವಿವಿಧ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಮಹಿಳಾ ಬ್ಲಾಕ್ ಅಧ್ಯಕ್ಷೆ ಆಶಾ ಪೂಣಚ್ಚ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎ.ಜೆ. ಬಾಬು, ಹಿರಿಯರಾದ ಮೂಕಳೆರ ಕುಶಾಲಪ್ಪ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಟಾಟು ಮೊಣ್ಣಪ್ಪ, ಗೋಣಿಕೊಪ್ಪ ಪಂಚಾಯಿತಿ ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಕಾರ್ಮಿಕ ಘಟಕದ ಅಧ್ಯಕ್ಷೆ ಮಂಜುಳಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಪಂಕಜ, ಎಸ್.ಟಿ. ಘಟದ ಅಧ್ಯಕ್ಷ ಮಣಿಕುಂಞ, ತಾಲೂಕು ಯುವ ಅಧ್ಯಕ್ಷ ಮಲ್ಲಂಡ ಧ್ಯಾನ್ ದೇವಯ್ಯ, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜುನೈದ್ ಇದ್ದರು.