ಪೊನ್ನಂಪೇಟೆ, ಮೇ. ೨೨:ಕೊಡಗು ವಿಶ್ವವಿದ್ಯಾನಿಲಯ ಚಿಕ್ಕಅಳುವಾರದಲ್ಲಿ ನಡೆದ ವಿಶ್ವ ವಿದ್ಯಾನಿಲಯ ಮಟ್ಟದ ಯುವ ವೈಭವ ಕಾರ್ಯಕ್ರಮ ದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ೮೦ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಸಮಗ್ರ ರನ್ನರ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಫ್ಯಾಶನ್ ಶೋನಲ್ಲಿ, ಡ್ಯಾನ್ಸ್ನಲ್ಲಿ ಪ್ರಥಮ, ಸ್ಕಿಟ್‌ನಲ್ಲಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ನಿಧಿಶೋಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಳ್ಳುವ ಮೂಲಕ ಈ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ ಎಂದು ಪ್ರಾಂಶುಪಾಲ ಡಾ. ಎಂ. ಬಿ. ಕಾವೇರಿಯಪ್ಪ ತಿಳಿಸಿದ್ದಾರೆ.