ಮಡಿಕೇರಿ, ಮೇ ೨೪: ಪ್ರಸಕ್ತ ಸಾಲಿಗೆ ಮಡಿಕೇರಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೆ ಒಳಪಡುವ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ ೩೦ ಕೊನೆಯ ದಿನವಾಗಿದೆ. ಶೇ. ೭೫ ಸ್ಥಾನಗಳು ಪರಿಶಿಷ್ಟ ಜಾತಿ ಮತ್ತು ಉಳಿದ ಶೇ. ೨೫ ಸ್ಥಾನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ೫ನೇ ತರಗತಿಯಿಂದ ೧೦ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ನಿಲಯದಲ್ಲಿ ಉಚಿತ ಪೌಷ್ಟಿಕಯುಕ್ತ ಉಪಹಾರ/ ಊಟದ ವ್ಯವಸ್ಥೆ, ವಸತಿ, ಲೇಖನ ಸಾಮಗ್ರಿಗಳು, ಸಮವಸ್ತç, ಶೂ ಮತ್ತು ಸಾಕ್ಸ್, ವೈದ್ಯಕೀಯ ತಪಾಸಣೆ, ಅಂಶಕಾಲಿಕ ಬೋಧಕರಿಂದ ವಿಶೇಷ ಬೋಧನಾ ವ್ಯವಸ್ಥೆ, ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ, ಶುಚಿ ಸಂಭ್ರಮ ಕಿಟ್ ಹಾಗೂ ಬಾಲಕಿಯರಿಗೆ ಒನಕೆ ಓಬವ್ವ ಆತರಕ್ಷಣಾ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ hಣಣಠಿs://sತಿ.ಞಚಿಡಿ.ಟಿiಛಿ.iಟಿ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿ ಅರ್ಜಿಯೊಂದಿಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಭಾವಚಿತ್ರ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಸಂಬAಧಿಸಿದ ನಿಲಯಗಳ ವಾರ್ಡನ್‌ರವರಿಗೆ ಸಲ್ಲಿಸಬೇಕು.
ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಸಂತ ಜೋಸೆಫರ ಕಾನ್ವೆಂಟ್ ಹತ್ತಿರ, ಮಡಿಕೇರಿ ದೂರವಾಣಿ ಸಂಖ್ಯೆ: ೬೩೬೩೫೦೧೭೨೬, ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಚೈನ್‌ಗೇಟ್, ಮಡಿಕೇರಿ ದೂರವಾಣಿ ಸಂಖ್ಯೆ: ೭೩೪೮೮೪೦೦೭೦, ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಚೇರಂಬಾಣೆ ದೂರವಾಣಿ ಸಂಖ್ಯೆ: ೯೭೪೧೭೪೭೬೬೧ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂರವಾಣಿ ಸಂಖ್ಯೆ ೯೪೮೦೮೪೩೧೫೫ ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.