ಕುಶಾಲನಗರ, ಮೆ ೨೪: ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಹಿರಿಯ ಪತ್ರಕರ್ತರ ಸನ್ಮಾನ ಗೌರವ ಕಾರ್ಯಕ್ರಮದ ಅಡಿಯಲ್ಲಿ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಕಾರ್ಯದರ್ಶಿ ಹಾಗೂ ಹಿರಿಯ ಪತ್ರಕರ್ತರಾದ ಕುದುಪಜೆ ಬಸಪ್ಪ ಅವರನ್ನು ಕುಶಾಲನಗರ ಸಮೀಪದ ಮಾದಾಪಟ್ಟಣದಲ್ಲಿರುವ ನಿವಾಸಕ್ಕೆ ತೆರಳಿ ದಂಚಿಪತಿ ಸಮೇತರಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ತಾಲೂಕು ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಜಿಲ್ಲಾ ಸಂಘದ ಉಪಾಧ್ಯಕ್ಷೆ ವನಿತಾ ಚಂದ್ರಮೋಹನ್, ನಿರ್ದೇಶಕ ಟಿ.ಆರ್. ಪ್ರಭುದೇವ್, ಕುಶಾಲನಗರ ತಾಲೂಕು ಸಂಘದ ಖಜಾಂಚಿ ವಿನೋದ್, ಕಾರ್ಯದರ್ಶಿ ಕೆ.ಕೆ. ನಾಗರಾಜ ಶೆಟ್ಟಿ, ಕುಡೆಕಲ್ ಗಣೇಶ್, ಸದಸ್ಯರಾದ ಸಬಲಂ ಭೋಜಣ್ಣ ರೆಡ್ಡಿ ಉಪಸ್ಥಿತರಿದ್ದರು.