ಚೆಟ್ಟಳ್ಳಿ, ಮೇ ೨೪: ಸುಂಟಿಕೊಪ್ಪ ಸಮೀಪದ ಕೆದಕಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡೆಮ್ಮೆಗಳ (ಕಾಟಿ) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರೈತರು ಹಾಗೂ ಸಾರ್ವಜನಿಕರು ಆತಂಕದಲ್ಲಿ ಬದುಕುವಂತಾಗಿದೆ. ಕೃಷಿ ಬೆಳೆಗಳಿಗೆ ಅಪಾರ ಹಾನಿ ಉಂಟುಮಾಡುವುದರ ಜೊತೆಗೆ ಜನರ ಜೀವಕ್ಕೂ ಅಪಾಯಕಾರಿಯಾಗಿ ಪರಿಣಮಿಸಿರುವ ಕಾಡು ಕೋಣಗಳನ್ನು ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿ ಸೆರೆಹಿಡಿದು ದೂರದ ಮೀಸಲು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕೆAದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅರಣ್ಯ ಪ್ರದೇಶಗಳಿಗೆ ಹೊಂದಿಕೊAಡಿರುವ ಕೆದಕಲ್ ಏಳನೇ ಮೈಲ್ ಭಾಗದಲ್ಲಿ ೧೫ ರಿಂದ ೨೦ ಕಾಡೆಮ್ಮೆಗಳ ಸಂಚಾರ ಸಾಮಾನ್ಯವಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಅವು ಮಾನವ ವಸತಿ ಪ್ರದೇಶಗಳಿಗೆ ಹೆಚ್ಚಾಗಿ ನುಗ್ಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಾಫಿ, ಅಡಿಕೆ ತೋಟಗಳು, ಬಾಳೆ ತೋಟಗಳು ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿ ಉಂಟಾಗುತ್ತಿದೆ. ರಾತ್ರಿ ವೇಳೆ ಮಾತ್ರವಲ್ಲದೆ ಹಗಲಿನಲ್ಲಿಯೂ ಕಾಡುಕೋಣಗಳು ಕಾಣಿಸಿಕೊಳ್ಳುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಇತ್ತೀಚೆಗೆ ರಾಷ್ಟಿçÃಯ ಹೆದ್ದಾರಿ - ೨೭೫ರಲ್ಲಿ ನಡೆದ ಘಟನೆ ಈ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ತೋಟ ಪ್ರದೇಶದಿಂದ ಏಕಾಏಕಿ ರಸ್ತೆಗೆ ನುಗ್ಗಿದ ಕಾಡುಕೋಣ ಕೇರಳ ಮೂಲದ ಟಿಟಿ ವಾಹನ ಹಾಗೂ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ ವನ್ಯಜೀವಿಗಳ ಹಾವಳಿ ಈಗ ಕೇವಲ ಕೃಷಿ ನಷ್ಟಕ್ಕೆ ಸೀಮಿತವಾಗಿಲ್ಲ, ಸಾರ್ವಜನಿಕರ ಜೀವಕ್ಕೂ ಅಪಾಯವಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಿದೆ.

ಇದಕ್ಕೆ ಪರಿಹಾರವಾಗಿ ಗ್ರಾಮಸ್ಥರು ಮೂಡಿಗೆರೆ ಉಪ ವಿಭಾಗದ ಅಲ್ದೂರು ವಲಯದ ಹಕ್ಕಿಮಕ್ಕಿ ಪ್ರದೇಶದಲ್ಲಿ ಇತ್ತೀಚೆಗೆ ಸರಕಾರ ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ನಡೆದ ಕಾಡುಕೋಣ ಸೆರೆ ಕಾರ್ಯಾಚರಣೆಯನ್ನು ಉದಾಹರಣೆಯಾಗಿ ಉಲ್ಲೇಖಿ ಸುತ್ತಿದ್ದಾರೆ. ಉಪಟಳ ನೀಡುತ್ತಿದ್ದ ಮೂರು ಕಾಡೆಮ್ಮೆಗಳನ್ನು ಸೆರೆಹಿಡಿಯಲು ಸರ್ಕಾರ ಅನುಮತಿ ನೀಡಿದ್ದರಿಂದ ಅರಣ್ಯ ಇಲಾಖೆ, ಪಶುವೈದ್ಯರು ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿತ್ತು. ಮೊದಲ ದಿನ ವಿಫಲವಾದರೂ, ಎರಡನೇ ದಿನ ಅರವಳಿಕೆ ಚುಚ್ಚುಮದ್ದು ನೀಡಿ ಯಶಸ್ವಿಯಾಗಿ ಬಂಧಿಸಿ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿತ್ತು.

ಕೆದಕಲ್ ಭಾಗದಲ್ಲಿಯೂ ಇದೇ ರೀತಿಯ ವೈಜ್ಞಾನಿಕ ಹಾಗೂ ಸುರಕ್ಷಿತ ಕಾರ್ಯಾಚರಣೆ ನಡೆಸಬೇಕು ಎಂಬುದು ಸ್ಥಳೀಯರ ಆಗ್ರಹ. ಕಾಡೆಮ್ಮೆಗಳನ್ನು ಅರಣ್ಯಕ್ಕೆ ಓಡಿಸುವುದು ಶಾಶ್ವತ ಪರಿಹಾರವಲ್ಲ. ಅವುಗಳನ್ನು ಸೆರೆಹಿಡಿದು ಸೂಕ್ತ ವಾಸಸ್ಥಳವಿರುವ ಮೀಸಲು ಅರಣ್ಯ ಪ್ರದೇಶಗಳಿಗೆ ಸ್ಥಳಾಂತರಿಸುವ ಮೂಲಕ ಮಾನವ - ವನ್ಯಜೀವಿ ಸಂಘರ್ಷವನ್ನು ಕಡಿಮೆ ಮಾಡಬಹುದು ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.

ಅರಣ್ಯ ಇಲಾಖೆಯು ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಸರ್ಕಾರದ ಅನುಮತಿ ಪಡೆದು ಶೀಘ್ರದಲ್ಲೇ ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲವಾದರೆ ಕೃಷಿ ನಷ್ಟದ ಜೊತೆಗೆ ಸಾರ್ವಜನಿಕರ ಜೀವಕ್ಕೆ ಅಪಾಯ ಹೆಚ್ಚಾಗುವ ಸಾಧ್ಯತೆ ಎಂದು ಸ್ಥಳೀಯ ಗ್ರಾಮಸ್ಥರಾದ ಪುಲ್ಲೇರ ವಸಂತ, ಪುಲ್ಲೇರ ತಿಮ್ಮಯ್ಯ, ಪುಲ್ಲೇರ ಪೆಮ್ಮಯ್ಯ, ಅಬ್ದುಲ್ ಖಾದರ್ ಒತ್ತಾಯಿಸಿದ್ದಾರೆ.