ಮಡಿಕೇರಿ, ಮೇ ೨೪: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಮರಗೋಡು ಗೌಡ ಸಮಾಜದ ಸಂಯುಕ್ತಾಶ್ರಯದಲ್ಲಿ ಅರೆಭಾಷೆ ಗ್ರಾಮೋತ್ಸವ ಕಾರ್ಯಕ್ರಮ ತಾ.೨೬ ರಂದು ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ತಾ.೨೬ ರಂದು ಬೆಳಿಗ್ಗೆ ೯.೩೦ ಗಂಟೆಗೆ ಮರಗೋಡು ಗೌಡ ಸಮಾಜದಿಂದ ಮೆರವಣಿಗೆ ನಡೆಯಲಿದೆ. ಮರಗೋಡು ಗೌಡ ಸಮಾಜದ ಅಧ್ಯಕ್ಷ ಕಟ್ಟೆಮನೆ ಜನಾರ್ಧನ ಅವರು ಚಾಲನೆ ನೀಡಲಿದ್ದಾರೆ. ನಂತರ ಬೆಳಿಗ್ಗೆ ೧೦.೩೦ ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.
ಬಳಿಕ ಮಧ್ಯಾಹ್ನ ೨ ಗಂಟೆಯಿAದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರು ಸಮಾಜ ಸೇವಕ ಚೆರಿಯಮನೆ ರತ್ನಕುಮಾರ, ಹೊಸ್ಕೇರಿ ಗ್ರಾಮದ ಕಾಫಿ ಬೆಳೆಗಾರ ಪಾಣತ್ತಲೆ ದೇವಯ್ಯ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಉದ್ಘಾಟನೆಯಾಗಲಿದೆ.
ಸಂಜೆ ೫.೩೦ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಮರಗೋಡು ಗೌಡ ಸಮಾಜದ ಅಧ್ಯಕ್ಷ ಕಟ್ಟೆಮನೆ ಜನಾರ್ಧನ, ಕೊಡಗು ಗೌಡ ಸಮಾಜದ ಅಧ್ಯಕ್ಷ ದಂಬೆಕೋಡಿ ಎಸ್. ಆನಂದ, ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ ನವೀನ, ಬೆಂಗಳೂರು ಸಮಾಜ ಸೇವಕ ಎಡಿಕೇರಿ ಪ್ರಸನ್ನ, ಮರಗೋಡು ಪ್ರಗತಿಪರ ಕೃಷಿಕ ಕಟ್ಟೆಮನೆ ಪ್ರೇಮ ಗಣೇಶ್, ಕೊಡಗು ವಿದ್ಯಾ ಸಂಘದ ನಿರ್ದೇಶಕಿ ಪುಷ್ಪವೇಣಿ ಪಾಂಡನ, ಮರಗೋಡು ಗ್ರಾ.ಪಂ. ಮಾಜಿ ಅಧ್ಯಕ್ಷೆ ಬೊಳ್ಳೂರು ಜಾನಕಿ, ಮರಗೋಡು ಕಾಫಿ ಬೆಳೆಗಾರರಾದ ತೋಟಂಬೈಲು ಪಾರ್ವತಿ, ಅಕಾಡೆಮಿ ಸದಸ್ಯರು ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಸದಸ್ಯ ಸಂಚಾಲಕರಾದ ಸಂದೀಪ್ ಪೂಳಕಂಡ, ಸೂದನ ಈರಪ್ಪ ಹಾಗೂ ಮೋಹನ್ ಪೊನ್ನಚ್ಚನ ಅವರು ತಿಳಿಸಿದ್ದಾರೆ.