ಮಡಿಕೇರಿ, ಮೇ ೨೫: ಮೂರ್ನಾಡು ೩೩/೧೧ ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿAದ ಹೊರಹೊಮ್ಮುವ ಎಫ್೩ ಮೂರ್ನಾಡು ಫೀಡರ್‌ನಲ್ಲಿ ತಾ. ೨೬ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಮುತ್ತಾರ್‌ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಕೋರಿದ್ದಾರೆ.