ವೀರಾಜಪೇಟೆ, ಮೇ.೨೫: ಬದಲಾದ ಕಾಲಘಟ್ಟದಲ್ಲಿ ಪತ್ರಕರ್ತರು ತಂತ್ರಜ್ಞಾನಗಳನ್ನು ಬಳಸಿಕೊಂಡು ಪರಿಣಾಮಕಾರಿಯಾಗಿ ಕೆಲಸ ಮಾಡುವಂತಾಗಬೇಕೆAದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಾಗೂ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿAದ ವೀರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ಗೋಲ್ಡನ್ ಬೀನ್ ಹೋಂಸ್ಟೇಯಲ್ಲಿ ನಡೆದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಪತ್ರಕರ್ತರು ಸಮಾಜದಲ್ಲಿ ನಿರಂತರವಾಗಿ ಗುರುತಿಸಿಕೊಳ್ಳುವುದರ ಮೂಲಕ, ಸಮಾಜದಲ್ಲಿ ಎಲ್ಲಾ ರಂಗದಲ್ಲಿ ಪತ್ರಕರ್ತರ ಸೇವೆ ಮಾಡುತ್ತಿದ್ದಾರೆ. ಪ್ರಸ್ತುತ ದಿನಗಳಲ್ಲಿ ತಂತ್ರಜ್ಞಾನಗಳು ಬದಲಾಗುತ್ತಿವೆ. ಇದರ ಸದುಪಯೋಗವನ್ನು ಪತ್ರಕರ್ತರು ವೃತ್ತಿಯಲ್ಲಿ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಪ್ರಶಸ್ತಿ ಪಡೆದ ಪತ್ರಕರ್ತರ ಜವಬ್ದಾರಿ ಸಮಾಜದಲ್ಲಿ ಹೆಚ್ಚಿದೆ.ಜವಬ್ದಾರಿ ಅರಿತು ಸಮಾಜಕ್ಕೆ ಪತ್ರಕರ್ತ ಕೊಡುಗೆ ನೀಡಬೇಕಾಗಿದೆ. ಕೊಡಗು ಜಿಲ್ಲೆಯಲ್ಲಿ ಪತ್ರಕರ್ತರ ಕ್ರೀಡಾ ಚಟುವಟಿಕೆಗಳ ಮೂಲಕ ಜಿಲ್ಲೆಯ ಪತ್ರಕರ್ತರು ಒಂದೇ ವೇದಿಕೆಯಡಿಯಲ್ಲಿ ಬರಲು ಸಾಧ್ಯವಾಯಿತು. ಪತ್ರಕರ್ತರ ಕಷ್ಟಗಳಿಗೆ ಸಂಘ ಸದಾ ಬೆನ್ನೆಲುಬಾಗಿ ನಿಂತಿದೆ. ಇದೀಗ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದಿAದ ಜಿಲ್ಲೆಯ ನಾಲ್ಕು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ತಲಾ ೫೦ ಸಾವಿರ ನೀಡಿದ್ದೇವೆ.

ವೀರಾಜಪೇಟೆ ತಾಲೂಕು ಸಂಘಕ್ಕೆ ೮೩ ಸಾವಿರ ರೂ ಕ್ಷೇಮಾಭಿವೃದ್ಧಿ ನಿಧಿಗೆ ನೀಡಿದ್ದೇವೆ ಎಂದು ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಹೇಳಿದರು.

ವೀರಾಜಪೇಟೆ ಸಮೀಪದ ಮಗ್ಗುಲ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವ್ಯವಸ್ಥಾಪಕಿ ಪೂಜಾ ಸಜೇಶ್ ಮಾತನಾಡಿ, ಪತ್ರಕರ್ತ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಉತ್ತಮ ಕಾರ್ಯಕ್ರಮವಾಗಿದ್ದು, ಮಕ್ಕಳಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಮತ್ತಷ್ಟು ಸಾಧನೆ ಮಾಡಲು ಉತ್ತಮ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಅನು ಕಾರ್ಯಪ್ಪ ಮಾತನಾಡಿ, ಪತ್ರಕರ್ತನಿಗೆ ಪ್ರಶಸ್ತಿ ಪ್ರೇರಕ ಶಕ್ತಿಯಾಗಿದೆ. ಒಬ್ಬ ಪತ್ರಕರ್ತನಿಗೆ ಮೊದಲ ಬಾರಿಗೆ ಪ್ರಶಸ್ತಿ ದೊರೆತಾಗ ಆಗುವಂತಹ ಸಂತೋಷವನ್ನು ವರ್ಣಿಸಲು ಪದಗಳೇ ಸಾಲದು. ಅದರೊಂದಿಗೆ ಪತ್ರಕರ್ತರ ಜವಬ್ದಾರಿ ಕೂಡ ಹೆಚ್ಚಲಿದೆ. ಬೇರೆ ಕಡೆಗಳಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಬಹಳ ಕಡಿಮೆ.ಆದರೆ ಕಾರ್ಯನಿರತ ಪತ್ರಕರ್ತರ ಸಂಘದಿAದ ಸಾಧಕ ಪತ್ರಕರ್ತರ ಮಕ್ಕಳನ್ನು ಗುರುತಿಸಿ, ಪ್ರೋತ್ಸಾಹಿಸುವುದು ಮಕ್ಕಳ ನೆನಪಿನಲ್ಲಿ ಸದಾ ಉಳಿಯಲಿದೆ ಎಂದು ಅನು ಕಾರ್ಯಪ್ಪ ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿ ಮಾತನಾಡಿದ, ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರೆಜಿತ್ ಕುಮಾರ್ ಗುಹ್ಯ ಅವರು, ತಾಲೂಕು ಸಂಘದಿAದ ಉತ್ತಮ ಕಾರ್ಯಕ್ರಮ ಆಯೋಜಿಸುತ್ತಾ ಬಂದಿದ್ದೇವೆ. ಈಗಾಗಲೇ ಐದು ದತ್ತಿನಿಧಿ ಪ್ರಶಸ್ತಿಗಳನ್ನು ಸ್ಥಾಪನೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ದತ್ತಿನಿಧಿಗಳನ್ನು ಸ್ಥಾಪನೆ ಮಾಡಲು ಉದ್ದೇಶಿಸಿದ್ದೇವೆ ಎಂದರು.

ಕ್ಷೇಮಾಭಿವೃದ್ಧಿ ನಿಧಿ ಹಸ್ತಾಂತರ

ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದಿAದ ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ೮೩ ಸಾವಿರ ರೂ ಚೆಕ್ ಅನ್ನು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು, ತಾಲೂಕು ಅಧ್ಯಕ್ಷರಿಗೆ ಹಸ್ತಾಂತರಿಸಿದರು.

ವಾರ್ಷಿಕ ಪ್ರಶಸ್ತಿ

ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ೨೦೨೫ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಇಸ್ಮಾಯಿಲ್ ಕಂಡಕರೆ, ಪಿ.ವಿ ಅಂಥೋಣಿ, ಕಿಶೋರ್ ಕುಮಾರ್ ಶೆಟ್ಟಿ, ರವಿಕುಮಾರ್, ವಾಸು, ಹಾಗೂ ಸುಬ್ರಮಣಿ ಅವರು ಪಡೆದುಕೊಂಡರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿAದ ೨೦೨೪ನೇ ಸಾಲಿನ ಅತ್ಯುತ್ತಮ ಗ್ರಾಮಾಂತರ ವರದಿ ಪ್ರಶಸ್ತಿ ಪಡೆದ ಇಸ್ಮಾಯಿಲ್ ಕಂಡಕರೆ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟಿçÃಯ ಸಮಿತಿ ಸದಸ್ಯರಾದ ಪಳೆಯಂಡ ಪಾರ್ಥ ಚಿಣ್ಣಪ್ಪ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಮೋಹನ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷೆ ವನಿತಾ ಚಂದ್ರಮೋಹನ್ ಇದ್ದರು. ಕಾರ್ಯಕ್ರಮವನ್ನು ಸಂಘದ ಕಾರ್ಯದರ್ಶಿ ಹೇಮಂತ್ ನಿರೂಪಿಸಿ, ನಿರ್ದೇಶಕರಾದ ಕಿಶೋರ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರ.ಕಾರ್ಯದರ್ಶಿ ಎ.ಎಸ್ ಮುಸ್ತಫಾ ವಂದಿಸಿದರು.

ಮಹಾಸಭೆ

ವೀರಾಜಪೇಟೆ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷರಾದ ಕೆ.ಕೆ ರೆಜಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರ.ಕಾರ್ಯದರ್ಶಿ ಎಎಸ್ ಮುಸ್ತಫಾ ವಾರ್ಷಿಕ ವರದಿ ವಾಚಿಸಿದರು. ಖಜಾಂಚಿ ಹೇಮಂತ್ ಕುಮಾರ್ ಅವರು ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷೆ ವನಿತಾ ಚಂದ್ರಮೋಹನ್ ಅವರು ವೀಕ್ಷಕರಾಗಿ ಆಗಮಿಸಿ, ಮಹಾಸಭೆಯನ್ನು ನಡೆಸಿಕೊಟ್ಟರು.