ಮಡಿಕೇರಿ, ಮೇ ೨೫: ೨೦೨೫-೨೬ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಇಲಾಖಾ ವೆಬ್‌ಸೈಟ್ hಣಣಠಿs://sತಿಜ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
೨೦೨೫-೨೬ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್‌ನಲ್ಲಿ ಶೇ.೬೦ ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.
ಅರ್ಜಿ ನಮೂನೆ(ದೃಢೀಕರಣ)ಯೊಂದಿಗೆ, ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ (ದೃಢೀಕರಣ), ಜಾತಿ ದೃಢೀಕರಣ ಪ್ರಮಾಣ ಪತ್ರ (ದೃಢೀಕರಣ), ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ (ದೃಢೀಕರಣ), ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ(ದೃಢೀಕರಣ) ಸಲ್ಲಿಸಬೇಕು. ಅಗತ್ಯ ದಾಖಲಾತಿಗಳನ್ನು ಲಗತ್ತಿಸದೇ ಇರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ೦೮೨೭೨-೨೨೫೫೩೧, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ- ೦೮೨೭೨-೨೨೩೫೫೨, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ- ೦೮೨೭೬-೨೮೧೧೧೫, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ- ೦೮೨೭೪-೨೪೯೪೭೬ ಇಲ್ಲಿಂದ ಪಡೆಯಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.