ಮಡಿಕೇರಿ, ಮೇ ೨೫: ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾಮದ ಅಯ್ಯಪ್ಪ ಭದ್ರಕಾಳಿ ದೇವಸ್ಥಾನದಲ್ಲಿ ತಾ. ೨೭ ಮತ್ತು ೨೮ ರಂದು ನಡೆಯುವ ಬೇಡು ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ ರಲ್ಲಿ ದತ್ತವಾಗಿರುವ ಅಧಿಕಾರದಂತೆ ತಾ. ೨೮ ರಂದು ಬೆಳಿಗ್ಗೆ ೬ ಗಂಟೆಯಿAದ ಮಧ್ಯರಾತ್ರಿ ೧೨ ಗಂಟೆಯವರೆಗೆ ದೇವರಪುರ ಗ್ರಾಮದ ಸುತ್ತಮುತ್ತಲಿನ ೫ ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.