ಮಡಿಕೇರಿ, ಮೇ ೨೫: ೨೦೨೬-೨೭ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ (ಪಿಯುಸಿ. ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಕ್ಕೆ ಸೇರಿದ ಪಿ.ಯು.ಸಿ. ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ. ರೂ. ೨.೫೦ ಲಕ್ಷ, ಪ್ರವರ್ಗ-೨ಎ,೨ಬಿ,೩ಎ,೩ಬಿ ರೂ. ೧ ಲಕ್ಷ ಆಗಿರುತ್ತದೆ. ೨೦೨೬-೨೭ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ (ಪಿ.ಯು.ಸಿ. ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ವಿದ್ಯಾರ್ಥಿ ನಿಲಯಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಸ್ಯಾಟ್ಸ್ ಐಡಿ(SಂಖಿS Iಆ)ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶದ ವಿಳಾಸ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ ಅನ್ನು ಸಂಪರ್ಕಿಸಿ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ೧೫ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಮಡಿಕೇರಿ ದೂ.ಸಂ. ೦೮೨೭೨-೨೯೫೬೨೮, ಮಡಿಕೇರಿ ತಾಲೂಕು ಕಚೇರಿ - ಮೊ.ಸಂಖ್ಯೆ: ೯೬೩೨೨೨೫೮೪೭, ವೀರಾಜಪೇಟೆ ತಾಲೂಕು ಕಚೇರಿ - ಮೊ.ಸಂ. ೯೪೪೮೨೦೫೯೧೯, ಸೋಮವಾರಪೇಟೆ ತಾಲೂಕು ಕಚೇರಿ - ಮೊ.ಸಂ. ೮೭೬೨೪೭೬೭೯೦, ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೪ ಈ ದೂರವಾಣಿ ಸಂಖ್ಯೆಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.