ಸೋಮವಾರಪೇಟೆ, ಮೇ ೨೫: ನಿವೇಶನ ರಹಿತರಿಗೆ ಉಚಿತ ನಿವೇಶನ ನೀಡಬೇಕೆಂದು ಕೊಡಗು ಜಿಲ್ಲಾ ಬಹುಜನ ಕಾರ್ಮಿಕ ಸಂಘಟನೆ ವತಿಯಿಂದ ಕುಂಬೂರು ಪೈಸಾರಿಯಲ್ಲಿ ನಡೆಯುತ್ತಿರುವ ಆಹೋರಾತ್ರಿ ಧರಣಿ ೨೪ನೇ ದಿನಕ್ಕೆ ಕಾಲಿಟ್ಟಿದೆ.
ತಾ. ೨೮ರಂದು ರಾಷ್ಟಿçÃಯ ಬಿಎಸ್‌ಪಿಯ ರಾಜ್ಯನಾಯಕರಾದ ಮಾರಸಂದ್ರ ಮುನಿಯಪ್ಪ, ಮಾಜಿ ಶಾಸಕ ಸಿ.ಎಂ.ಇಬ್ರಾಹಿA, ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್, ಮಾಜಿ ಶಾಸಕ ಎಚ್.ಡಿ. ಬಸವರಾಜು ಅವರು ಧರಣಿಯಲ್ಲಿ ಪಾಲ್ಗೊಳ್ಳದ್ದಾರೆ ಎಂದು ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಕೆ. ಮೊಣ್ಣಪ್ಪ ಪತ್ರಿಕೆಗೆ ತಿಳಿಸಿದ್ದಾರೆ.
ತಾ. ೨೯ರಂದು ಮಡಿಕೇರಿಯಲ್ಲಿ ಧರಣಿ ನಿರತರ ಪ್ರತಿಭಟನೆ ನಡೆಯಲಿದೆ. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೈಸಾರಿ ಒತ್ತುವರಿಯನ್ನು ತೆರವುಗೊಳಿಸಿ, ಕನಿಷ್ಟ ೫೦ ಎಕ್ರೆ ಜಾಗವನ್ನು ಕಾಯ್ದಿರಿಸಬೇಕು. ಬಡ ನಿವೇಶನ ರಹಿತರಿಗೆ ನಿವೇಶನ ಹಂಚಬೇಕು ಎಂಬ ಆಗ್ರಹದೊಂದಿಗೆ ಕಾರ್ಮಿಕರ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.