ಸೋಮವಾರಪೇಟೆ,ಮೇ.೨೫: ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ಪ್ರಸಕ್ತ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ತಾ.೩೧ ರಂದು ಪಟ್ಟಣದ ವಿರಕ್ತಮಠದಲ್ಲಿ ಬೆಳಿಗ್ಗೆ ೧೦.೩೦ ಕ್ಕೆ ನಡೆಯಲಿದೆ. ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಹಾಗೂ ಸೋಮವಾರಪೇಟೆಯ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶೀಕೇಂದ್ರ ಸ್ವಾಮೀಜಿಗಳು ಸಭೆಯ ಸಾನಿಧ್ಯ ವಹಿಸಲಿದ್ದಾರೆ. ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ಅಧ್ಯಕ್ಷ ಎಫ್. ಸಿ. ಹಿರೇಮಠ ಶಾಸ್ತ್ತಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಬಸವಕುಮಾರ ಶಾಸ್ತ್ರಿ ತಿಳಿಸಿದ್ದಾರೆ.