ವೀರಾಜಪೇಟೆ, ಮೇ ೨೫: ವೀರಾಜಪೇಟೆಯ ಶಿವಕೇರಿಯ ಇತಿಹಾಸ ಪ್ರಸಿದ್ಧ ಆದಿ ದಂಡಿನ ಮಾರಿಯಮ್ಮ ದೇವಸ್ಥಾನದ ವಾರ್ಷಿಕೋತ್ಸವ ವಿಜೃಂಭಣೆಯಿAದ ನಡೆಯಿತು.
ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ ಗಣಪತಿ ಹೋಮ, ಗಂಗೆ ಪೂಜೆ, ಭಂಡಾರ ತರುವುದು ಹಾಗೂ ಮಧ್ಯಾಹ್ನ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಮತ್ತು ಸಂಜೆ ದೇವಿಯ ಪಲ್ಲಕ್ಕಿ ಸೇವೆಯೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು.
ರಾತ್ರಿ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಭಕ್ತಾದಿಗಳು ಹಾಜರಿದ್ದರು.