ಮಡಿಕೇರಿ, ಮೇ ೨೫: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರಕ್ಕೆ ಮೂರು ವರ್ಷ ಪೂರ್ಣಗೊಂಡಿದ್ದು, ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಭೂ ಗ್ಯಾರಂಟಿ ಯೋಜನೆಯನ್ನು ಸಹ ಜಾರಿಗೊಳಿಸಿದ್ದು, ಸರ್ಕಾರದ ಗ್ಯಾರಂಟಿ ಯೋಜನೆ ತಲುಪಿಸುವಲ್ಲಿ ಇನ್ನಷ್ಟು ಪ್ರಯತ್ನ ಮಾಡಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷÀ ತೀತಿರ ಧರ್ಮಜ ಉತ್ತಪ್ಪ ಅವರು ಸೂಚಿಸಿದ್ದಾರೆ.

ನಗರದ ಜಿ.ಪಂ. ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆ ಸಂಬAಧ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರ ಶಕ್ತಿ, ಗೃಹಲಕ್ಷಿö್ಮ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೆಯೇ ಭೂ ಒಡೆತನ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಪ್ರಗತಿಯತ್ತ ಸಾಗುತ್ತಿದೆ. ಜೊತೆಗೆ ಬಡಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡುತ್ತಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳು ತಲುಪುವಂತಾಗಲು ಅಧಿಕಾರಿಗಳ ಕರ್ತವ್ಯ ಮಹತ್ತರ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಜೊತೆಗೆ ಕೆಎಸ್‌ಆರ್‌ಟಿಸಿ ಬಲಪಡಿಸುವಲ್ಲಿಯೂ ಸಹ ಇದೊಂದು ಅತ್ಯುತ್ತಮ ಯೋಜನೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಂದಾಯ ಇಲಾಖೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಮಾಡುವತ್ತ ಹೆಜ್ಜೆ ಇಡಲಾಗಿದ್ದು, ಆ ದಿಸೆಯಲ್ಲಿ ಭೂ ದಾಖಲೆಗಳಿಗೆ ಡಿಜಿಟಲ್ ಸ್ಪರ್ಶ ನೀಡುವಲ್ಲಿ ಕ್ರಾಂತಿಕಾರಕ ಹೆಜ್ಜೆ ಸರ್ಕಾರ ಇಟ್ಟಿದೆ. ಆಸ್ತಿ ಮತ್ತು ಆರ್‌ಟಿಸಿ ಆಧಾರ್ ಜೋಡಣೆ ಮೂಲಕ ನಕಲಿ ದಾಖಲೆ ಸೃಷ್ಟಿಗೆ ಕಡಿವಾಣ ಹಾಕಲಾಗಿದೆ. ಲ್ಯಾಂಡ್ ಬೀಟ್, ಇ-ಪೌತಿ ಖಾತೆ ಸೇರಿದಂತೆ ಕಂದಾಯ ಇಲಾಖೆಯಲ್ಲಿ ಹೊಸ ಬದಲಾವಣೆಗೆ ಕಂದಾಯ ಸಚಿವರು ಮುಂದಾಗಿದ್ದು, ಈ ಬಗ್ಗೆ÷ ಗ್ರಾಮೀಣ ಪ್ರದೇಶದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಸೂಚಿಸಿದರು.

ಅಧಿಕಾರಕ್ಕೆ ಬಂದ ಮೂರು ವರ್ಷದಲ್ಲಿ ಜನ ಸಾಮಾನ್ಯರು, ಕೃಷಿಕರು, ಮಹಿಳೆಯರು, ಯುವಕರು ಮತ್ತು ಶ್ರಮಿಕರ ವರ್ಗದ ಕಲ್ಯಾಣಕ್ಕಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳನ್ನು ತಲುಪಿಸುವಂತಾಗಬೇಕು ಎಂದು ಅವರು ನುಡಿದರು.

ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರು ಮಾಹಿತಿ ನೀಡಿ ಒಟ್ಟು ೧,೬೬,೪೭,೫೬೭ ವಯಸ್ಕ ಮಹಿಳಾ ಪ್ರಯಾಣಿಕರು ಮತ್ತು ೪,೦೨,೯೯೯ ಹೆಣ್ಣು ಮಕ್ಕಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿನಿಯರು ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿ, ಯೋಜನೆಯ ಪ್ರಯೋಜನೆಯನ್ನು ಪಡೆದುಕೊಂಡಿದ್ದಾರೆ. ಸರಾಸರಿ ೧೬,೩೪೮ ಪ್ರಯಾಣಿಕರು ಒಂದು ದಿನಕ್ಕೆ ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿರುತ್ತಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.೩೨.೬೫ ರಷ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ ಎಂದರು.

ಆಹಾರ ಇಲಾಖೆ ಉಪ ನಿರ್ದೇಶಕ ಭೀಮರಾಯ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ ೮,೬೭೦ ಎಎವೈ (ಅಂತ್ಯೋದಯ) ಹಾಗೂ ೯೭,೨೮೪ ಬಿಪಿಎಲ್ (ಆದ್ಯತಾ) ಪಡಿತರ ಚೀಟಿಗಳು ಇವೆ. ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯಡಿ ಎಎವೈ ಪ್ರತೀ ಪಡಿತರ ಚೀಟಿದಾರರಿಗೆ ೩೫ ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಹಾಗೂ ಬಿಪಿಎಲ್ (ಅದ್ಯತಾ) ಪಡಿತರ ಚೀಟಿದಾರರ ಪ್ರತೀ ಸದಸ್ಯರಿಗೆ ೧೦ ಕೆ.ಜಿ ಅಕ್ಕಿಯಂತೆ ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಒಟ್ಟು ೧,೦೫,೯೫೪ ಪಡಿತರ ಚೀಟಿ ಕುಟುಂಬಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಗೃಹಲಕ್ಷಿö್ಮ ಯೋಜನೆಯಡಿ ೧,೧೭,೯೦೫ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ ೨,೦೦೦ ರೂ.ನಂತೆ ಫೆಬ್ರವರಿವರೆಗೆ ಹಣ ಪಾವತಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ್ ಅವರು ಮಾಹಿತಿ ನೀಡಿದರು.

ಗೃಹಜ್ಯೋತಿ ಯೋಜನೆಯಡಿ ಶೇ.೯೯.೧ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸೆಸ್ಕ್ ಇಲಾಖೆ ಎಂಜಿನಿಯರ್ ಅವರು ಮಾಹಿತಿ ನೀಡಿದರು.

ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್ ಮಾತನಾಡಿ, ೨೦೨೬ ರ ಏಪ್ರಿಲ್ ಮಾಸಾಂತ್ಯಕ್ಕೆ ೧೮೫೦ ಪದವೀಧರ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಹಾಗೆಯೇ ೩೦ ಡಿಪ್ಲೋಮಾ ಫಲಾನುಭವಿಗಳಿಗೆ ಸಹಾಯಧನ ಕಲ್ಪಿಸಲಾಗಿದೆ ಎಂದರು.

ಮಳೆಗಾಲದ ಸಂದರ್ಭದಲ್ಲಿ ತೋಟಗಳಲ್ಲಿ ಕೆಲಸ ನಿರ್ವಹಿಸುವವರ ಸುರಕ್ಷತೆಯನ್ನು ಕಾಪಾಡುವತ್ತ ಗಮನಹರಿಸಬೇಕು. ವಿದ್ಯುತ್ ಮಾರ್ಗದಲ್ಲಿ ಮರಗಿಡಗಳನ್ನು ಕಡಿಯುವುದು, ಕುಡಿಯುವ ನೀರು ಪೂರೈಕೆ, ಮತ್ತಿತರ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷರುಗಳಾದ ಕೆ.ಸಿ.ಭೀಮಯ್ಯ, ಪಿ.ಆರ್.ಪಂಕಜ, ನಾಸೀರ್, ಸದಸ್ಯರಾದ ಬಿ.ಡಿ.ಅಣ್ಣಯ್ಯ, ಕೆ.ಎಂ.ಬಶೀರ್, ಕೆ.ಎಂ.ಉಸ್ತಪ, ಪಿ.ಎಲ್.ಸುರೇಶ್, ಕೆ.ಜಿ.ಪೀಟರ್, ಕಾಂತರಾಜು, ಮಂದ್ರೀರ ಮೋಹನ್ ದಾಸ್, ಜಾನ್ಸನ್ ಪಿ.ವಿ., ಕಾಳಿಮಾಡ ಪ್ರಶಾಂತ್ ಇತರರು ತಮ್ಮ ವ್ಯಾಪ್ತಿಗೆ ಸಂಬAಧಿಸಿAತೆ ಹಲವು ಕುಂದುಕೊರತೆ ಬಗ್ಗೆ ಬೆಳಕು ಚೆಲ್ಲಿದರು. ಜಿ.ಪಂ.ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬೀ ಇದ್ದರು.