ಪೊನ್ನಂಪೇಟೆ, ಮೇ. ೨೫: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಮಧುಮೇಹ ರೋಗದ ಲಕ್ಷಣಗಳು ಹಾಗೂ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಉಪ ಪ್ರಾಂಶುಪಾಲರಾದ ಪ್ರೊ. ಎಂ. ಎಸ್ ಭಾರತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸರ್ಕಾರಿ ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ. ಅಮೂಲ್ಯ ಆರ್.ಹೆಚ್ ಮಾತನಾಡಿ, ನಿಗದಿತ ಸಮಯಕ್ಕೆ ಆಹಾರ ಸೇವನೆ ಹಾಗೂ ನಿಯಮಿತ ವ್ಯಾಯಾಮದ ಮೂಲಕ ಮಧುಮೇಹವನ್ನು ನಿಯಂತ್ರಣಕ್ಕೆ ತರಬಹುದು ಎಂದರು.
ಮನಸ್ಸಿಗೆ ಒತ್ತಡವಾಗ ದಂತೆ ಎಚ್ಚರಿಕೆ ವಹಿಸಬೇಕು. ಸರಿಯಾದ ಸಮಯಕ್ಕೆ ನಿದ್ರೆ ಮಾಡುವುದನ್ನು ರೂಢಿಸಿಕೊಳ್ಳಬೇಕು. ಮಧುಮೇಹವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಆದರೆ ನಮ್ಮ ಜೀವನ ಶೈಲಿಯನ್ನು ಉತ್ತಮ ರೀತಿಯಲ್ಲಿ ಬದಲಾವಣೆ ಮಾಡಿಕೊಂಡರೆ ಅದನ್ನು ನಿಯಂತ್ರಣಕ್ಕೆ ತರಬಹುದು ಹಾಗೂ ಆರೋಗ್ಯವಂತರಾಗಿರಬಹುದು ಎಂದು ಅವರು ಸಲಹೆ ನೀಡಿದರು.
ಈ ಸಂದರ್ಭ ಐ.ಕ್ಯೂ.ಎ.ಸಿ ಸಂಚಾಲಕಿ ಡಾ. ನಯನಾ ತಮ್ಮಯ್ಯ, ಎನ್.ಎಸ್.ಎಸ್ ಅಧಿಕಾರಿಗಳಾದ ಎಂ. ಎ. ಕುಶಾಲಪ್ಪ, ಪೂಜಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದ