ಸುಂಟಿಕೊಪ್ಪ, ಮೇ ೨೫: ಕಂಬಿಬಾಣೆಯಲ್ಲಿರುವ ಶ್ರೀ ರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ೧೧ನೇ ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಸಭಾಭವನ ಉದ್ಘಾಟನೆ ತಾ. ೩೧ ರಂದು ನಡೆಯಲಿದೆ.
ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಭಾಸ್ಕರ ಕಲ್ಲುರಾಯ, ಕ್ಷೇತ್ರದ ಆರ್ಚಕರಾದ ಪ್ರಭಾಕರ ಕುಂದಣ್ಣಯ್ಯ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನಡೆಯಲಿದೆ. ಗಣಪತಿ ಹೋಮ, ದುರ್ಗಾ ಹೋಮ, ರಾಮತಾರಕ ಹೋಮ, ಕಳಸ ಪೂಜೆ, ಶ್ರೀರಾಮ ಮತ್ತು ಚಾಮುಂಡೇಶ್ವರಿ ದೇವರಿಗೆ ಪಂಚಾಮೃತ ಅಭಿಷೇಕ ಸಹಿತ ಪಂಚವಿAಶತಿ ಕಲಾಭಿಷೇಕ ಮಹಾಪೂಜೆಯೊಂದಿಗೆ ಪ್ರಸಾದ ವಿತರಣೆ ನಡೆÀಯಲಿದೆ. ಬೆಳಿಗ್ಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ದೇವಸ್ಥಾನದ ಆವರಣದಲ್ಲಿ ನಿರ್ಮಿಸಿರುವ ರಘುರಾಮ ಸಭಾ ಭವನವನ್ನು ದಾನಿ ಹಾಗೂ ಕಾಫಿ ಬೆಳೆಗಾರ ಟಿ.ಕೆ. ಸಜೀವ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಯದುವೀರ್ ಒಡೆಯರ್, ಶಾಸಕ ಡಾ. ಮಂತರ್ಗೌಡ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಭಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಡಾ. ಶಶಿಕಾಂತ ರೈ ವಹಿಸಲಿದ್ದಾರೆ.