ಮಡಿಕೇರಿ, ಮೇ ೨೬: ಮುಂಗಾರು ಪ್ರಾರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ಅಗತ್ಯ ಪೂರ್ವ ತಯಾರು ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದರು.

ಪೊನ್ನಂಪೇಟೆ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದರು.

ಜಿಲ್ಲೆಯ ಸೂಕ್ಷö್ಮ ಪ್ರದೇಶಗಳಲ್ಲಿ ಅಗತ್ಯ ಎಚ್ಚರ ವಹಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳ ಕುಟುಂಬಗಳಿಗೆ ಕಾಲಕಾಲಕ್ಕೆ ಮಾಹಿತಿ ನೀಡುವಂತಾಗಬೇಕು. ಕಾಳಜಿ ಕೇಂದ್ರದಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಶಿಥಿಲ ಸ್ಥಿತಿಯಲ್ಲಿರುವ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಯಾವುದೇ ಅವಘಡಗಳು ಆಗದ ರೀತಿಯಲ್ಲಿ ನೋಡಿಕೊಳ್ಳುವಂತೆ ನಿರ್ದೇಶನ ನೀಡಿದರು.

ಕುಡಿಯುವ ನೀರು ಪೂರೈಕೆಗೆ ಸಂಬAಧಿಸಿದAತೆ ಯಾವೆಲ್ಲಾ ಕಾಮಗಾರಿಗಳು ಪೂರ್ಣಗೊಂಡಿದೆ ಹಾಗೂ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಜೆಜೆಎಂ ಯೋಜನೆಯಡಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ತಿಳಿಸಿದರು.

ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆ ಕೃಷಿ ಇಲಾಖೆಯಡಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಮತ್ತು ಬಿತ್ತನೆ ಬೀಜ, ಯೂರಿಯ, ಕೃಷಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಪಡೆದು ರೈತರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲಕ್ಕೆ ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮುಂಗಾರು ಸಂಬAಧ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದರು.

ಪಶುಸಂಗೋಪನೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಇದೇ ಸಂದರ್ಭ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಹಲವು ವಿಷಯಗಳ ಕುರಿತು ಮಾತನಾಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಎನ್.ಹೆಚ್, ವೀರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್, ಪೊನ್ನಂಪೇಟೆ ತಹಶೀಲ್ದಾರ್ ಸಿ.ಎಸ್.ಸಂಜನಾ, ವೀರಾಜಪೇಟೆ ತಾ.ಪಂ.ಇಒ ರಾಜೇಶ್ ಕೆ.ಆರ್, ಮಡಿಕೇರಿ ತಾ.ಪಂ.ಇಒ ಶೇಖರ್, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.