ಮಡಿಕೇರಿ, ಮೇ.೨೬: ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪ.ಜಾತಿ ಮತ್ತು ಪ.ಪಂಗಡ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ೨೦೨೬-೨೭ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಪ.ಜಾತಿ ಮತ್ತು ಪ.ಪಂಗಡ ರೂ.೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ ರೂ. ೧ ಲಕ್ಷ ಆಗಿರುತ್ತದೆ. ವಿದ್ಯಾರ್ಥಿಗಳು hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ೮ ಕೊನೆಯ ದಿನವಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ೧೫ ಕೊನೆಯ ದಿನವಾಗಿದೆ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜheಟಠಿಟiಟಿe@gmಚಿiಟ.ಛಿom ಇ-ಮೇಲ್ ಮುಖಾಂತರ ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವೀರಾಜಪೇಟೆ ತಾಲೂಕು, ವಿರಾಜಪೇಟೆ ತಾಲೂಕು ಪಂಚಾಯಿತಿ ಆವರಣ-ಪೊನ್ನಂಪೇಟೆ; ಇವರ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೪ ತಾಲ್ಲಕು ಕಚೇರಿ ಮೊ.ಸಂ. ೯೪೪೮೨೦೫೯೧೯ ಹಾಗೂ ೮೦೯೫೬೮೪೧೪೬ ಅನ್ನು ಸಂಪರ್ಕಿಸಬಹುದು.