ವೀರಾಜಪೇಟೆ, ಮೇ. ೨೮: ಮುಂಗಾರು ಹಿನ್ನೆಲೆಯಲ್ಲಿ ವೀರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳಿಗೆ, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಸೂಚನೆ ನೀಡಿದರು.

ವೀರಾಜಪೇಟೆ ಪುರಭವನದಲ್ಲಿ ನಡೆದ ತಾಲೂಕು ಮಟ್ಟದ ಕಾರ್ಯಪಡೆ (ಟಾಸ್ಕ್ಫೋರ್ಸ್) ಹಾಗೂ ವೀರಾಜಪೇಟೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ತಾಲೂಕಿನ ವಿವಿಧ ಭಾಗಗಳಲ್ಲಿ ಈಗಾಗಲೇ ಗಾಳಿ-ಮಳೆಯಿಂದ ಮರದ ಕೊಂಬೆಗಳು ಬೀಳುತ್ತಿರುವುದು ವಿದ್ಯುತ್ ಮತ್ತು ಸಾರಿಗೆ ಸಂಪರ್ಕಕ್ಕೆ ಅಡಚಣೆ ಉಂಟು ಮಾಡುತ್ತಿದೆ. ಆದ್ದರಿಂದ ರಸ್ತೆ ಬದಿಯ ಅಪಾಯಕಾರಿ ಮರದ ಕೊಂಬೆಗಳನ್ನು ಕಡಿಯುವುದು, ಚರಂಡಿ ಹೂಳು ತೆರವುಗೊಳಿಸುವುದು, ಗುಂಡಿಬಿದ್ದ ರಸ್ತೆಗಳನ್ನು ದುರಸ್ತಿ ಮಾಡುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸಮರ್ಪಕವಾಗಿ ಆಲಿಸಿ ತಳಮಟ್ಟದಲ್ಲಿಯೇ ಸಮಸ್ಯೆಗಳನ್ನು ಪರಿಹರಿಸಬೇಕು. ಸಂಬAಧಪಟ್ಟ ಇಂಜಿನಿಯರ್‌ಗಳು ಮತ್ತು ಅಧಿಕಾರಿಗಳು ಸ್ಥಳೀಯ ಮಟ್ಟದಲ್ಲಿಯೇ ಸ್ಪಂದಿಸಿ ಸಮಸ್ಯೆ ಬಗೆಹರಿಸಬೇಕು. ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ವಿದ್ಯುತ್ ಇಲಾಖೆಯು ಹಳೆಯ ಕಂಬಗಳನ್ನು ಬದಲಿಸುವುದು, ಅಗತ್ಯ ವಿದ್ಯುತ್ ಪರಿವರ್ತಕಗಳನ್ನು ದಾಸ್ತಾನು ಇಟ್ಟುಕೊಳ್ಳುವುದು ಸೇರಿದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೆಸ್ಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುತ್ತಿರುವುದರಿಂದ ಸಮರ್ಪಕ ನೀರು ಪೂರೈಕೆಗೆ ಆದ್ಯತೆ ನೀಡಬೇಕು. ರಸ್ತೆ ಬದಿಯ ಗಿಡಗಂಟೆಗಳನ್ನು ತೆರವುಗೊಳಿಸದಿದ್ದರೆ ಸೆಸ್ಕ್, ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಮೇಲಿನ ಒತ್ತಡ ಹೆಚ್ಚಲಿದೆ. ಮಳೆಯಿಂದ ಮನೆ ಹಾನಿಯಾದಲ್ಲಿ ತಕ್ಷಣ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು. ಮಳೆಗಾಲದಲ್ಲಿ ಆಹಾರ ಧಾನ್ಯಗಳ ಸಮರ್ಪಕ ಪೂರೈಕೆ, ನದಿ ಹಾಗೂ ಹೊಳೆ ಬದಿಯ ನಿವಾಸಿಗಳಿಗೆ ಮುನ್ನೆಚ್ಚರಿಕಾ ಮಾಹಿತಿ ನೀಡುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸಲಹೆ ನೀಡಿದರು. ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ವೀರಾಜಪೇಟೆ ತಾಲೂಕು ಅಧ್ಯಕ್ಷ ಜಾನ್ಸನ್ ಪಿ.ವಿ. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂಗಾರು ಹಿನ್ನೆಲೆಯಲ್ಲಿ ಈಗಾಗಲೇ ಪಂಚಾಯತ್ ರಾಜ್, ಕಂದಾಯ, ಪೊಲೀಸ್ ಹಾಗೂ ವಿವಿಧ ಇಂಜಿನಿಯರಿAಗ್ ವಿಭಾಗಗಳ ಸಹಯೋಗದಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಬೇಕು. ಸರಕಾರದ ಗ್ಯಾರಂಟಿ ಯೋಜನೆ ತಲುಪಿಸುವಲ್ಲಿ ಇನ್ನಷ್ಟು ಪ್ರಯತ್ನ ಮಾಡಬೇಕು. ಗೃಹಲಕ್ಷಿ÷್ಮಯೋಜನೆಯಡಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವಲ್ಲಿ ಬೃಹತ್ ಆರ್ಥಿಕ ಕ್ರಾಂತಿ ಎಂದರೆ ತಪ್ಪಾಗಲಾರದು. ಗೃಹಲಕ್ಷಿ÷್ಮ ಯೋಜನೆಯಡಿ ನೀಡಲಾಗುವ ೨ ಸಾವಿರ ರೂ. ಕುಟುಂಬದ ನಿರ್ವಹಣೆಗೆ ಸಹಕಾರಿಯಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಆಹಾರ ಭದ್ರತೆಯನ್ನು ಖಾತರಿ ಪಡಿಸುವ ಅನ್ನಭಾಗ್ಯ ಯೋಜನೆಯು ಯಶಸ್ವಿಯಾಗಿ ಯುವನಿಧಿ ಯೋಜನೆಯನ್ನು ಪರಿಣಾಮಕಾರಿಯಾಗಿ ತಲುಪಿಸಿ ಎಂದು ಹೇಳಿದರು.

ಮಳೆಗಾಲದ ಸಂದರ್ಭ ತೋಟಗಳಲ್ಲಿ ಕೆಲಸ ನಿರ್ವಹಿಸುವವರ ಸುರಕ್ಷತೆಯನ್ನು ಕಾಪಾಡುವತ್ತ ಗಮನಹರಿಸಬೇಕು. ವಿದ್ಯುತ್ ಮಾರ್ಗದಲ್ಲಿ ಮರಗಿಡಗಳನ್ನು ಕಡಿಯುವುದು, ಕುಡಿಯುವ ನೀರು ಪೂರೈಕೆ, ಮತ್ತಿತರ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಬಶೀರ್ ಮಾತನಾಡಿ, ಪ್ರವಾಹ ಪೀಡಿತ ಮತ್ತು ಸೂಕ್ಷ÷್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಮಳೆ ಆರಂಭವಾದ ಬಳಿಕ ಜಂಗಲ್ ಕಟಿಂಗ್, ಗುಂಡಿ ಮುಚ್ಚುವುದು ಮತ್ತು ಚರಂಡಿ ಸ್ವಚ್ಛಗೊಳಿಸುವ ಕಾಮಗಾರಿಗಳನ್ನು ಕೈಗೊಳ್ಳುವುದು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ, ಮಳೆ ಆರಂಭಕ್ಕೂ ಮುನ್ನವೇ ಅಗತ್ಯ ಸಿದ್ಧತೆ ಪೂರ್ಣಗೊಳಿಸಬೇಕು. ನೀರಿನ ಪೈಪ್ ಲೈನ್ ಅಳವಡಿಕೆ ಸಂಬAಧ ರಸ್ತೆ ಅಗೆದಿದ್ದು ಇನ್ನೂ ಕಾಮಗಾರಿ ಪೂರ್ಣಗೊಳ್ಳದೆ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ ಎಂದು ನುಡಿದರು. ಸಭೆಯಲ್ಲಿ ಅನುಷ್ಠಾನ ಸಮಿತಿ ಸದಸ್ಯೆ ಕಾವೇರಮ್ಮ, ತಾಲೂಕು ಪಂಚಾಯಿತಿ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸೆಸ್ಕ್, ಲೋಕೋಪಯೋಗಿ ಇಲಾಖೆ, ಪಂಚಾಯಿತಿ ರಾಜ್ ಇಲಾಖೆ, ವೀರಾಜಪೇಟೆ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳ ಅಭಿವೃದ್ದಿ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗೃಹಲಕ್ಮಿ ಯೋಜನೆಯ ಅಧಿಕಾರಿಗಳು ಮಳೆಗಾಲದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಇತರರು ತಮ್ಮ ವ್ಯಾಪ್ತಿಗೆ ಸಂಬAಧಿಸಿAತೆ ಹಲವು ಕುಂದುಕೊರತೆ ಬಗ್ಗೆ ಬೆಳಕು ಚೆಲ್ಲಿದರು.