ಸಿದ್ದಾಪುರ, ಮೇ ೩೧: ಏಕಾಏಕಿ ಮನೆಯ ಅಂಗಳಕ್ಕೆ ಕಾಡಾನೆಗಳು ಲಗ್ಗೆ ಇಟ್ಟು ಆತಂಕ ಸೃಷ್ಟಿಸಿದ ಘಟನೆ ವಾಲ್ನೂರು ಗ್ರಾಮದಲ್ಲಿ ನಡೆದಿದೆ.

ವಾಲ್ನೂರು ಗ್ರಾಮದ ಕಾಫಿತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳ ಪೈಕಿ ಎರಡು ಕಾಡಾನೆಗಳು ಭಾನುವಾರದಂದು ವಾಲ್ನೂರು ಗ್ರಾಮದ ನಿವಾಸಿ ಭುವನ ಎಂಬವರ ಮನೆಯಂಗಳಕ್ಕೆ ಲಗ್ಗೆ ಇಟ್ಟಿವೆ. ಎರಡು ಆನೆಗಳನ್ನು ಕಂಡ ಮನೆಯ ಮಂದಿ ಮತ್ತು ಅಕ್ಕಪಕ್ಕದ ನಿವಾಸಿಗಳು ಭಯಭೀತರಾಗಿ ಕೂಗಾಡುತ್ತಾ ಓಡಿ ಅಪಾಯದಿಂದ ಪಾರಾಗಿದ್ದಾರೆ.

ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ. ಮೀನು ಕೊಲ್ಲಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿ ಸಚಿನ್ ನಿಂಬಾಳ್ಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಾಡಿಗೆ ಅಟ್ಟಲಾಯಿತು.