ಕುಶಾಲನಗರ, ಮೇ ೩೧: ಕುಶಾಲನಗರ ಸಮೀಪದ ಗುಮ್ಮನಕೊಲ್ಲಿ ಬಳಿ ೧೧ ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ತೀವ್ರ ಸುಟ್ಟ ಗಾಯಗಳಿಂದ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಚೇತರಿಸಿಕೊಳ್ಳುತ್ತಿದ್ದು ಇದೀಗ ವಿಶೇಷ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಶುಕ್ರವಾರ ಮೈಸೂರು ಆಸ್ಪತ್ರೆಗೆ ತೆರಳಿ ಬಾಲಕಿಯ ಯೋಗ ಕ್ಷೇಮ ವಿಚಾರಿಸಿದರು.

ಚಿಕಿತ್ಸೆಯ ವೆಚ್ಚದ ಸಲುವಾಗಿ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಮೂಲಕ ೩.೭೫ ಲಕ್ಷ ರೂಗಳ ಚೆಕ್ ಅನ್ನು ಕುಶಾಲನಗರ ಸೆಸ್ಕ್ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್ ಅವರು ಶನಿವಾರ ಮೈಸೂರಿಗೆ ತೆರಳಿ ಬಾಲಕಿಯ ತಾಯಿಗೆ ಹಸ್ತಾಂತರ ಮಾಡಿದರು. ಒಟ್ಟು ಚಿಕಿತ್ಸೆಗೆ ಅಂದಾಜು ರೂ ೭.೫ ಲಕ್ಷ ವೆಚ್ಚ ತಗಲುವ ಬಗ್ಗೆ ಆಸ್ಪತ್ರೆ ವೈದ್ಯಾಧಿಕಾರಿಗಳು ವಿದ್ಯುತ್ ಸರಬರಾಜು ನಿಗಮದ ಹಿರಿಯ ಅಧಿಕಾರಿಗಳಿಗೆ ಅಂದಾಜು ಪಟ್ಟಿ ನೀಡಿದ್ದು ಈ ಸಂಬAಧ ಇದೀಗ ಶೇ. ೫೦ ರಷ್ಟು ಪಾವತಿಸಲಾಗಿದೆ ಎಂದು ನಿಗಮದ ಅಧೀಕ್ಷಕ ಅಭಿಯಂತರ ಸೋಮಶೇಖರ್ ತಿಳಿಸಿದ್ದಾರೆ.