ಸಿದ್ದಾಪುರ, ಜೂ. ೧: ಭಾನುವಾರದಂದು ಸಂಜೆ ಸುರಿದ ಧಾರಾಕಾರ ಮಳೆ ಹಾಗೂ ಗಾಳಿಗೆ ಸಿಲುಕಿ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ - ಬಾಣಂಗಾಲ ಗ್ರಾಮದ ನಿವಾಸಿ ನಜೀರ್ ಕೆ.ಎಂ. ಎಂಬವರ ಮನೆಯ ಮೇಲ್ಛಾವಣಿಯ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ.

ವೀರಾಜಪೇಟೆ ತಾಲೂಕು ತಹಶೀಲ್ದಾರ್ ಪ್ರವೀಣ್ ಅವರ ಮಾರ್ಗದರ್ಶನದಲ್ಲಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ನೇತೃತ್ವದಲ್ಲಿ ಪಂಚಾಯಿತಿ ಆಡಳಿತಾಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದರು. ಇದಲ್ಲದೆ ಸಿದ್ದಾಪುರ ಭಾಗದಲ್ಲಿ ಕೂಡ ಗಾಳಿ - ಮಳೆಗೆ ಮನೆಗಳ ಮೇಲೆ ಮರಗಳು ಬಿದ್ದು ಸಣ್ಣ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ.