ಕುಶಾಲನಗರ, ಜೂ. ೧: ಆರ್ಥಿಕವಾಗಿ ದುರ್ಬಲ ವಾಗಿರುವ ಜನರಿಗೆ ಸಂಘ ಸಂಸ್ಥೆಗಳು ಸ್ಪಂದನ ನೀಡಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಕರೆ ನೀಡಿದರು.
ಕೊಡಗು ಜಿಲ್ಲಾ ಕ್ರೆöÊಸ್ತ ಸೇವಾ ಸಂಘ ಕುಶಾಲನಗರ ಘಟಕ ವತಿಯಿಂದ ಕುಶಾಲನಗರ ಮುಳ್ಳುಸೋಗೆ ತಪೋವನ ಸಮುದಾಯ ಭವನದಲ್ಲಿ ನಡೆದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಇತರರ ಕಷ್ಟಗಳ ಬಗ್ಗೆ ಚಿಂತನೆ ಮಾಡುವ ಮೂಲಕ ಸಹಕಾರ ನೀಡುವ ಮನಸ್ಥಿತಿ ಪ್ರತಿಯೊಬ್ಬರೂ ಹೊಂದಬೇಕು ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಕುಶಾಲನಗರ ಸಂತ ಸೆಬಾಸ್ಟಿಯನ್ ದೇವಾಲಯದ ಧರ್ಮ ಗುರುಗಳಾದ ಫಾ ಜ್ಞಾನ ಪ್ರಕಾಶ್ ಮಾತನಾಡಿ, ಮಕ್ಕಳಿಗೆ ಪ್ರೋತ್ಸಾಹ ನೀಡುವ ಮೂಲಕ ಅವರನ್ನು ಸಮಾಜದ ಸಂಪತ್ತಾಗಿ ಪರಿವರ್ತಿಸುವುದು ಸಂಘ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದರು.
ತಪೋವನ ಸಂಸ್ಥೆಯ ಸುಪೀರಿಯರ್ ಫಾ. ಜೋಕಿಮ್ ರಾಡ್ರಿಗಸ್ ಮಾತನಾಡಿ, ಮಕ್ಕಳು ಉನ್ನತ ಶಿಕ್ಷಣ ಉನ್ನತ ಹುದ್ದೆಯ ಗುರಿ ಹೊಂದಬೇಕು ಎಂದರು.
ಹೆಚ್ಚು ಅಂಕ ಪಡೆದ ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕ್ರೆöÊಸ್ತ ಸೇವಾ ಸಂಘದ ಕುಶಾಲನಗರ ಘಟಕದ ಅಧ್ಯಕ್ಷ ಎನ್.ಟಿ. ಜೋಸೆಫ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘದ ಅಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯೂ, ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಎ.ಜೆ. ಬಾಬು, ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ವಿ.ಎಸ್. ಸಜಿ, ಕುಶಾಲನಗರ ಟೌನ್ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ಸುಂಟಿಕೊಪ್ಪ ಸಹಕಾರ ಸಂಘದ ಅಧ್ಯಕ್ಷÀ ಜರ್ಮಿ ಡಿಸೋಜಾ ಉಪಸ್ಥಿತರಿದ್ದು ಮಾತನಾಡಿದರು. ಅತಿಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.