ಅಮ್ಮತ್ತಿ ಕೊಡವ ಸಮಾಜ
* ಗೋಣಿಕೊಪ್ಪಲು : ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣನವರಿಗೆ ಕರ್ನಾಟಕ ಸರಕಾರದ ನೂತನ ಸಚಿವ ಸಂಪುಟದಲ್ಲಿ ಕೊಡವರ ಪರವಾಗಿ ಸಚಿವ ಸ್ಥಾನ ನೀಡಲು ಅಮ್ಮತ್ತಿ ಕೊಡವ ಸಮಾಜದ ಆಡಳಿತ ಮಂಡಳಿ ವತಿಯಿಂದ ಪ್ರಬಲ ಬೇಡಿಕೆಯನ್ನು ಮುಂದಿರಿಸಲಾಗಿದೆ.ಕೊಡವ ಭಾಷಿಕ ಸಮುದಾಯಗಳ ಕೂಟ (ರಿ)
ವೀರಾಜಪೇಟೆ: ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟೀರ ಪೊನ್ನಣ್ಣ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡುವಂತೆ ಕೊಡವ ಭಾಷಿಕ ಸಮುದಾಯಗಳ ಕೊಟ ಒತ್ತಾಯಿಸಿದೆ.
ಈ ಕುರಿತು ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷರಾದ ಡಾ.ಮೇಚಿರ ಸುಭಾಷ್ ನಾಣಯ್ಯ ಹೇಳಿಕೆ ನೀಡಿ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯಿಸಿದ್ದಾರೆ.