ಮಡಿಕೇರಿ, ಜೂ. ೧೮: ಸ್ವಾಭಿಮಾನಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬಾಬಾ ಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆ ಅಂಗವಾಗಿ ಮಡಿಕೇರಿ ಪೌರ ಕಾರ್ಮಿಕರಿಗೆ ಸ್ವೆಟರ್ ಹಾಗೂ ಶ್ರೀ ಶಕ್ತಿ ವೃದ್ಧಾಶ್ರಮದ ತಂದೆ - ತಾಯಿಯರಿಗೆ ಬಟ್ಟೆ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತಾ. ೧೯ ರಂದು (ಇಂದು) ಮಧ್ಯಾಹ್ನ ೩ ಗಂಟೆಗೆ ಹೊಟೇಲ್ ರಾಜ್‌ದರ್ಶನ್ ಸಭಾಂಗಣದಲ್ಲಿ ದ.ಸಂ.ಸ. ಸಂಚಾಲಕ ಹೆಚ್.ಎಲ್. ದಿವಾಕರ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಉದ್ಘಾಟಿಸುವರು.
ಮುಖ್ಯ ಭಾಷಣಕಾರರಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೆ. ಬಾಲಕೃಷ್ಣ ರೈ ಆಗಮಿಸುವರು. ಮುಖ್ಯ ಅತಿಥಿಗಳಾಗಿ ನಿವೃತ್ತ ಸಹಾಯಕ ಉಪ ವೈದ್ಯಾಧಿಕಾರಿ ಡಾ. ಹೆಚ್.ಬಿ. ದೇವದಾಸ್, ಉದ್ಯಮಿ ಪ್ರಸನ್ನ ಎಡಿಕೇರಿ, ಸಮಾಜ ಸೇವಕಿ ದಂಬೆಕೋಡಿ ಕವನ್ ಭೀಷ್ಮ, ಕ.ಸಾ.ಪ. ಜಿಲ್ಲಾಧ್ಯಕ್ಷ ಕೇಶವ ಕಾಮತ್, ಇತರರು ಪಾಲ್ಗೊಳ್ಳಲಿದ್ದಾರೆ.