ಮಡಿಕೇರಿ, ಜೂ.೧೮: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮ ಕೃಷಿ ದಾಖಲಾತಿಗೆ ದಿನಾಂಕವನ್ನು ವಿಸ್ತರಿಸಲಾಗಿದೆ.

ಅಂತಿಮ ದಿನಾಂಕವನ್ನು ಜುಲೈ ೩ ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು ತಿತಿತಿ.uಚಿhs.eಜu.iಟಿ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಬಹುದು. ಡೌನ್‌ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಜುಲೈ, ೦೩ ರೊಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಟಶೇ.೪೫ (ಕನಿಷ್ಠ ಶೇ.೪೦ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ/ ಪ್ರವರ್ಗ-೧) ಅಂಕಗಳೊAದಿಗೆ ಉತ್ತೀರ್ಣರಾದ, ೧೯ ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.೫೦ ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೋಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬAಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಇರುತ್ತದೆ. ಕೃಷಿ ರಂಗದ ಪ್ರಾಯೋಗಿಕ ಪರಿಚಯ/ ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.

ಹೆಚ್ಚಿನ ವಿವರಗಳಿಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ, ಕರ್ನಾಟಕ, ಕಾಲೇಜು ಮತ್ತು ವಿಳಾಸ ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ ೫೭೬೨೧೩, ಉಡುಪಿ ಜಿಲ್ಲೆ. ದೂರವಾಣಿ ೯೧೦೮೨೪೧೩೪೨, ೯೬೮೬೪೦೫೦೯೦, ೮೮೮೪೧೪೧೪೪೫ ನ್ನು ಸಂಪರ್ಕಿಸಬಹುದು.