ಕುಶಾಲನಗರ, ಜೂ. ೧೮: ಕುಶಾಲನಗರ ಬೈಚನಹಳ್ಳಿ ಬಳಿ ನಾಲ್ಕು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಬಸ್ ತಂಗುದಾಣದ ಫಲಕ ಬದಲಾಯಿಸದೆ ಇರುವ ಪುರಸಭೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಪ್ರಮುಖರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ವೇದಿಕೆಯ ನಗರ ಅಧ್ಯಕ್ಷ ಡಿ.ಆರ್. ಯೋಗೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ದೀಪಕ್, ೧೯೮೫ರಲ್ಲಿ ತಂಗುದಾಣದಲ್ಲಿ ಅಳವಡಿಸಿರುವ ಹಳೆಯ ಫಲಕವನ್ನು ಇಂದಿಗೂ ಬದಲಾವಣೆ ಮಾಡದೆ ಅಧಿಕಾರಿಗಳು ನಿರ್ಲಕ್ಷಿöಸಿದ್ದಾರೆ ಎಂದು ಆರೋಪಿಸಿದರು. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಆಗಮಿಸಿದ ಕಂದಾಯ ಅಧಿಕಾರಿ ರಾಮು ಅವರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸಿ.ಎಂ. ಆಸಿಫ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಂಧ್ಯಾ ಗಣೇಶ್, ಜಿಲ್ಲಾ ಪದಾಧಿಕಾರಿಗಳಾದ ಆನಂದ ಗೌಡ, ಶೃತಿ ಗಿರೀಶ್, ವೇದಿಕೆಯ ವಿವಿಧ ಘಟಕಗಳ ಪದಾಧಿಕಾರಿಗಳು ಸದಸ್ಯರು ಇದ್ದರು.