ಮಡಿಕೇರಿ, ಜೂ. ೧೮: ಚೆಟ್ಟಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಟಿಬೆಟ್ ಕ್ಯಾಂಪ್ ಬೈಲುಕುಪ್ಪೆಯ ಟಿಬೆಟಿಯನ್ ಧಾರ್ಮಿಕ ಗುರುಗಳಾದ ನವಾಂಗ್ ಚಂಬೆಲ್ ಮತ್ತು ಶುನ್ ಟುಕವರು ತಮ್ಮ ಸಮಾಜ ಸೇವಾ ಸಂಸ್ಥೆಯ ವತಿಯಿಂದ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಕೆ. ತಿಲಕ ಸೇರಿದಂತೆ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.