ಗೋಣಿಕೊಪ್ಪಲು, ಜೂ. ೧೯: ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್‌ನ ಗೋಣಿಕೊಪ್ಪಲು ಘಟಕದ ೨೦೨೬-೨೭ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಕ್ಲಬ್‌ನ ನೂತನ ಅಧ್ಯಕ್ಷರಾಗಿ ಪಟ್ರಂಗಡ ಶ್ರೀಮಂತ್ ಮುತ್ತಣ್ಣ, ಕಾರ್ಯದರ್ಶಿಯಾಗಿ ಕೊಳ್ಳಿಮಾಡ ಕರುಂಬಯ್ಯ ಹಾಗೂ ಖಜಾಂಚಿಯಾಗಿ ಅಪ್ಪಚೆಟ್ಟೋಳಂಡ ಮಾದಪ್ಪ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಹಾಗೂ ಆಡಳಿತ ಮಂಡಳಿಯ ಅಧಿಕೃತ ಪದಗ್ರಹಣ ಸಮಾರಂಭವು ತಾ. ೨೬ರಂದು ನಡೆಯಲಿದೆ. ಪ್ರಸ್ತುತ ಅಧ್ಯಕ್ಷ ಚೆಪ್ಪುಡಿರ ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ, ಅವರ ನೇತೃತ್ವದ ಆಡಳಿತ ಮಂಡಳಿ ನೂತನ ತಂಡಕ್ಕೆ ಅಧಿಕಾರ ಹಸ್ತಾಂತರಿಸಲಿದೆ. ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲೆಯ ಮಾಜಿ ಜಿಲ್ಲಾ ಗವರ್ನರ್ ಲಯನ್ ವಸಂತ ಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿsಸಲಿದ್ದಾರೆ.