ಮಡಿಕೇರಿ, ಜೂ. ೧೯: ಸ್ಟಾಫ್ ಸೆಲೆಕ್ಷನ್ ಕಮಿಷನ್ ಭಾರತ ಸರ್ಕಾರ ಇವರು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಗ್ರೂಪ್ `ಬಿ` ನಾನ್ ಗೆಜೆಟೆಡ್ ಮತ್ತು ಗ್ರೂಪ್ `ಸಿ’ ಹುದ್ದೆಗಳನ್ನು ಭರ್ತಿ ಮಾಡಲು ‘ಅombiಟಿeಜ ಉಡಿಚಿಜuಚಿಣe ಐeveಟ ಇxಚಿmiಟಿಚಿಣioಟಿ -೨೦೨೬’ ರ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೨೨ ಕೊನೆಯ ದಿನವಾಗಿದೆ. ವಿದ್ಯಾರ್ಹತೆ: ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ: ೧೮ ರಿಂದ ೩೨ ವರ್ಷಗಳು. ಅರ್ಜಿ ಸಲ್ಲಿಸಲು ತಾ. ೨೨ ಕೊನೆಯ ದಿನವಾಗಿದೆ. ಖಾಲಿ ಹುದ್ದೆಗಳು ೧೨,೨೫೬. ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ -೨ಎ, ೨ಬಿ, ೩ಎ, ೩ಬಿ, ಗೆ ಸೇರಿದ ಪುರುಷ ಅಭ್ಯರ್ಥಿಗಳಿಗೆ ರೂ. ೧೦೦. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿ.ಡಬ್ಯೂ÷್ಲ.ಡಿ, ಇ.ಎಸ್.ಎಮ್, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: hಣಣಠಿs://ssಛಿ.gov.iಟಿ ಚಿಟಿಜ ತಿತಿತಿ.ssಛಿಞಞಡಿ.ಞಚಿಡಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ
ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು.
ಇಮೇಲ್: bಛಿತಿಜheಟಠಿಟiಟಿe@gmಚಿiಟ.ಛಿom ಸಂಪರ್ಕಿಸಬಹುದಾದ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೪. ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ದೂರವಾಣಿ ಸಂಖ್ಯೆ ೦೮೨೭೨-೨೯೫೬೨೮ ನ್ನು ಸಂಪರ್ಕಿಸಬಹುದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ದೀಪಕ್ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ
೨೦೨೬-೨೭ನೇ ಸಾಲಿಗೆ ಫ್ರೀ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ತರಗತಿಗಳಲ್ಲಿ ವ್ಯಾಂಸಗ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟ್ ಫಾರ್ ಎಫ್‌ವೈ ೨೦೨೬-೨೭ ಚಾಲನೆಯಲ್ಲಿದ್ದು hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ/ಠಿosಣ_sಚಿ_೨೬೨೭/ಟogiಟಿ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಕೊಡಗು ಜಿಲ್ಲೆಯ ವಿಶೇಷಚೇತನ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ. ೦೮೨೭೨-೨೯೫೮೨೯ ನ್ನು ಹಾಗೂ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲೂಕು ರಾಜೇಶ್ ಬಿ.ಆರ್. ಮೊ.ಸಂ. ೮೦೭೩೧೯೨೯೧೪, ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಹರೀಶ್ ಟಿ.ಆರ್. -೮೮೬೧೪೨೮೯೩೧ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಪ್ರಥನ್ ಕುಮಾರ್ ಸಿ.ಬಿ. ೯೯೦೦೮೮೩೬೫೪ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ತಿಳಿಸಿದ್ದಾರೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೬-೨೭ನೇ ಸಾಲಿಗೆ ಇಲಾಖೆಯ ಯೋಜನೆಗಳಾದ ಶುಲ್ಕ ಮರುಪಾವತಿ ಯೋಜನೆ, ವಿವಾಹ ಪ್ರೋತ್ಸಾಹ ಧನ, ಆರೈಕೆದಾರರ ಭತ್ಯೆ ಮತ್ತು ನಿರಾಮಯ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಅಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಆಯಾ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ದಾಖಲಾತಿಗಳೊಂದಿಗೆ ಆಗಸ್ಟ್ ೩೧ ರೊಳಗೆ ಈ ಕಚೇರಿಗೆ ಅಥವಾ ಆಯಾಯ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್‌ಡಬ್ಲುö್ಯ ಹಾಗೂ ತಾಲೂಕು ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‌ಡಬ್ಲುö್ಯಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನವರು ಹರೀಶ್ ಟಿ.ಆರ್. ಮೊ.ಸಂ. ೮೮೬೧೪೨೮೯೩೧, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ. ಮೊ.ಸಂ.೯೯೦೦೮೮೩೬೫೪ ಹಾಗೂ ಮಡಿಕೇರಿ ತಾಲೂಕಿನವರು ರಾಜೇಶ್ ಮೊ.ಸಂ. ೮೦೭೩೧೯೨೯೧೪ ಸಂಖ್ಯೆಗಳನ್ನು ಹಾಗೂ ಕಚೇರಿ ದೂ.ಸಂ. ೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ತಿಳಿಸಿದ್ದಾರೆ.