ಮಡಿಕೇರಿ ಜೂ. ೨೧: ನಗರದ ಪ್ರಮುಖ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಮಡಿಕೇರಿ ನಗರಸಭೆಯು ಅಳವಡಿಸಿರುವ “ಶುದ್ಧ ಕುಡಿಯುವ ನೀರಿನ ಘಟಕ”ವು ಕಳೆದ ಕೆಲವು ದಿನಗಳಿಂದ ದುರಸ್ತಿಯಲ್ಲಿದ್ದು, ಕಾರ್ಯನಿರ್ವಹಿಸದ ಸ್ಥಿತಿಯಲ್ಲಿದೆ. ಇದರಿಂದಾಗಿ ಸ್ಥಳೀಯ ನಿವಾಸಿಗಳು ಹಾಗೂ ನಿತ್ಯ ಸಂಚರಿಸುವ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.
ಸಾರ್ವಜನಿಕರಿಗೆ ಕಡಿಮೆ ವೆಚ್ಚದಲ್ಲಿ ಅಥವಾ ಉಚಿತವಾಗಿ ಶುದ್ಧ ನೀರು ಒದಗಿಸುವ ಉದ್ದೇಶದಿಂದ ಈ ಘಟಕವನ್ನು ಸ್ಥಾಪಿಸಲಾಗಿತ್ತು. ಆದರೆ, ಪ್ರಸ್ತುತ ಈ ಯಂತ್ರವು ಕೆಟ್ಟುಹೋಗಿದ್ದು, ನೀರಿನ ಹನಿಗೂ ಜನ ಪರದಾಡುವಂತಾಗಿದೆ. ಈ ಘಟಕವು ನಿಷ್ಪ್ರಯೋಜಕವಾಗಿ ನಿಂತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ತಕ್ಷಣವೇ ಮಡಿಕೇರಿ ನಗರಸಭೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ, ಶುದ್ಧ ಕುಡಿಯುವ ನೀರಿನ ಘಟಕವನ್ನು ತುರ್ತಾಗಿ ದುರಸ್ತಿಗೊಳಿಸಿ, ಸಾರ್ವಜನಿಕರಿಗೆ ಸುಲಭವಾಗಿ ಕುಡಿಯುವ ನೀರು ಸಿಗುವಂತೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ವರದಿ : ಸುಮನ್.ಎಸ್.ಲಾಲಿಪಾಳ್ಯ