ಕುಶಾಲನಗರ, ಜೂ. ೨೨: ಕೊಡಗು ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ತಾ. ೨೩ ರಂದು (ಇಂದು) ಕುಶಾಲನಗರ ರೈತ ಸಹಕಾರ ಭವನದಲ್ಲಿ ನಡೆಯಲಿದೆ. ಬೆ. ೯ ಗಂಟೆಗೆ ಕುಶಾಲನಗರದ ರಥಬೀದಿಯ ಬಸವೇಶ್ವರ ದೇವಾಲಯದಿಂದ ರೈತ ಸಹಕಾರ ಭವನ ತನಕ ಕಲಾ ತಂಡಗಳೊAದಿಗೆ ಮೆರವಣಿಗೆ ಸಾಗಲಿದ್ದು, ಕುಶಾಲನಗರ ರೈತ ಸಹಕಾರ ಭವನದಲ್ಲಿ ಬೆಳಗ್ಗೆ ೧೦.೩೦ಕ್ಕೆ ಶ್ರೀ ದೊಡ್ಡವೀರರಾಜೇಂದ್ರ ವೇದಿಕೆಯಲ್ಲಿ ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರೆ. ಸಮ್ಮೇಳನ ಅಧ್ಯಕ್ಷರಾದ ಅರಮೇರಿ ಕಳಂಚೇರಿ ಮಠದ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಷ್ಟಿçÃಯ ಅಧ್ಯಕ್ಷ ಡಾ ಸಿ ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.

ಶರಣ ಸಾಹಿತ್ಯ ಪರಿಷತ್ ಸ್ಮರಣ ಸಂಚಿಕೆ ಬಿಡುಗಡೆಯನ್ನು ಸಂಸದ ಯದುವೀರ್ ಒಡೆಯರ್ ಬಿಡುಗಡೆಗೊಳಿಸಲಿದ್ದಾರೆ. ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ನಂತರ ವಿವಿಧ ವಿಷಯಗಳಲ್ಲಿ ವಿಚಾರಗೋಷ್ಠಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ ೪:೩೦ ರಿಂದ ಸಮಾರೋಪ ಸಮಾರಂಭ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಶಂಭುನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಮಂಗಳೂರು ವಿವಿ ಕುಲಪತಿ ಡಾ ಪಿ.ಎಲ್. ಧರ್ಮ ಸಮಾರೋಪ ಭಾಷಣ ಮಾಡಲಿದ್ದಾರೆ.