ಕುಶಾಲನಗರ, ಜೂ. ೨೨: ಶ್ರೀ ಮುತ್ತಪ್ಪ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಅಂದಾಜು ೫೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಂಗಮAದಿರ ಹಾಗೂ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿತು.
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರ ಅನುದಾನದಲ್ಲಿ ೫ ಲಕ್ಷ ಮಂಜೂರಾಗಿದ್ದು, ಈ ಅನುದಾನ ಬಳಸಿಕೊಂಡು ಮೊದಲ ಹಂತದ ಕಾಮಗಾರಿ ನಡೆಸಲು ದೇವಾಲಯ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ವರದ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಶ್ರೀ ಮುತ್ತಪ್ಪ ಸ್ವಾಮಿ ದೇವಾಲಯ ಟ್ರಸ್ಟ್ ವತಿಯಿಂದ ಸುಮಾರು ೫೦ ಲಕ್ಷ ವೆಚ್ಚದಲ್ಲಿ ಬಯಲು ರಂಗಮAದಿರ ಮತ್ತು ಸಮುದಾಯ ಭವನ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ದೇವಾಲಯ ಸಮಿತಿ ಸದಸ್ಯರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಕಾಮಗಾರಿ ಹಂತ ಹಂತವಾಗಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ರಂಜಿತ್ ಕುಮಾರ್, ಉಪಾಧ್ಯಕ್ಷ ಬಾಬಿ, ಸಂಚಾಲಕ ಎಂ.ಎಸ್. ಮಣಿಕಂಠ, ಕಾರ್ಯದರ್ಶಿ ವಿನು ಕಮಲ್, ಸಹ ಕಾರ್ಯದರ್ಶಿ ಸಂದೀಪ್ ಹಾಗೂ ಸಮಿತಿ ಸದಸ್ಯರು ಮತ್ತು ಭಕ್ತರು ಉಪಸ್ಥಿತರಿದ್ದರು.