ಪೊನ್ನಂಪೇಟೆ, ಜೂ. ೨೨: ಪೊನ್ನಂಪೇಟೆ ತಾಲೂಕಿನ ಗ್ಲೆನ್‌ಲೋರ್ನಾ ಎಸ್ಟೇಟ್ ವತಿಯಿಂದ ಟಾಟಾ ಸಸ್ಟೇನೆಬಿಲಿಟಿ ಮಾಸಾಚರಣೆ ಅಂಗವಾಗಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ಗ್ಲೆನ್‌ಲೋರ್ನಾ ಎಸ್ಟೇಟ್ ವ್ಯವಸ್ಥಾಪಕ ಅರ್ಜಿತ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ಎಸ್ಟೇಟ್‌ನ ಉದ್ಯೋಗಿಗಳು ಹಾಗೂ ಕಾರ್ಮಿಕರು ಸಕ್ರಿಯವಾಗಿ ಪಾಲ್ಗೊಂಡರು. ಈ ವೇಳೆ ಹುದಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಆವರಣ ಹಾಗೂ ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಅಭಿಯಾನದ ಸಂದರ್ಭದಲ್ಲಿ ಸಂಗ್ರಹಿಸಲಾದ ಪ್ಲಾಸ್ಟಿಕ್ ತ್ಯಾಜ್ಯವನ್ನು ಪ್ರತ್ಯೇಕಿಸಿ, ಸೂಕ್ತ ವಿಲೇವಾರಿಗೆ ಗ್ರಾಮ ಪಂಚಾಯಿತಿಯ ತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ಹಸ್ತಾಂತರಿಸಲಾಯಿತು. ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಎಂದು ಸಂಘಟಕರು ತಿಳಿಸಿದ್ದಾರೆ.