ಮಡಿಕೇರಿ, ಜೂ. ೨೨: ನಗರದ ಸಂತ ಮೈಕಲರ ಶಾಲೆಯಲ್ಲಿ ಅತಿಸಾರಭೇದಿ ತಡೆಗಟ್ಟುವಿಕೆ ಕಾರ್ಯಕ್ರಮ ಅಂಗವಾಗಿ ೫ ವರ್ಷ ಕೆಳಗಿನ ಎಲ್ಲಾ ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು.

ಎರಡು ಓಆರೆಸ್ ಪ್ಯಾಕೆಟ್ ಮತ್ತು ಜಿûಂಕ್ ಮಾತ್ರೆಗಳನ್ನು ವಿತರಣೆ ಮಾಡಲಾಯಿತು. ಮಕ್ಕಳು ತಮ್ಮ ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡುವುದು, ಕೈ ತೊಳೆಯುವ ವಿಧಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ನಗರ ಆರೋಗ್ಯ ಕೇಂದ್ರದ ರೇವತಿ, ಜುರಾಬಿ, ಆಶಾ ಶಾಲೆಯ ಎಲ್ಲ ಶಿಕ್ಷಕರು ಭಾಗವಹಿಸಿದ್ದರು.