ವೀರಾಜಪೇಟೆ, ಜೂ. ೨೩: ಚುನಾವಣಾ ಆಯೋಗದ ಎಸ್ಐಆರ್ ಕುರಿತು ಮಾಹಿತಿ ಶಿಬಿರ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವೀರಾಜಪೇಟೆ ಬ್ಲಾಕ್ಗೆ ಸಂಬAಧಿಸಿದAತೆ ಅಂಬೇಡ್ಕರ್ ಭವನದಲ್ಲಿ ಶಿಬಿರ ನಡೆಯಿತು.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಮಾಹಿತಿ ಶಿಬಿರದಲ್ಲಿ ಭಾಗವಹಿಸಿದ್ದರು. ಬಳಿಕ ಮಾತನಾಡಿದ ಶಾಸಕರು, ವೀರಾಜಪೇಟೆ ಬ್ಲಾಕ್ ವ್ಯಾಪ್ತಿಯ ಮಾಹಿತಿ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಬಿಎಲ್ಎ-೨ ಗಳಿಗೆ ಹಾಗೂ ಆಹ್ವಾನಿತ ಪ್ರಮುಖರಿಗೆ ಎಸ್ಐಆರ್ ನಡೆಯುವ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ಒದಗಿಸಿದರು. ಕಾಂಗ್ರೆಸ್ ಪಕ್ಷದ ಅಧಿಕೃತ ಬಿಎಲ್ಎ-೨ ರವರುಗಳು ಕೈಗೊಳ್ಳಬೇಕಾದ ಎಚ್ಚರಿಕೆಯ ಕ್ರಮದ ಬಗ್ಗೆ ಸವಿವರವಾಗಿ ಮಾಹಿತಿಯನ್ನು ನೀಡಿದ ಕೆಪಿಸಿಸಿ ವತಿಯಿಂದ ಆಗಮಿಸಿದ ಪ್ರಮುಖರು, ನಾಡಿನ ಹಾಗೂ ಮತದಾರರ ಭವಿಷ್ಯದ ದೃಷ್ಟಿಯಲ್ಲಿ ಎಸ್ಐಆರ್ ಸಂದರ್ಭ ಕೈಗೊಳ್ಳಬೇಕಾದ ಜಾಗೃತ ಕ್ರಮಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.
ಸಭೆಯಲ್ಲಿ ಕೆಪಿಸಿಸಿ ಸದಸ್ಯ ಚಂದ್ರಮೌಳಿ, ಕೆಪಿಸಿಸಿ ವಕ್ತಾರ ಲಕ್ಷö್ಮಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಮಹಿಳಾ ಬ್ಲಾಕ್ ಅಧ್ಯಕ್ಷೆ ನಯನ, ನಗರ ಅಧ್ಯಕ್ಷ ಬೋಪಣ್ಣ, ವಲಯ ಅಧ್ಯಕ್ಷರುಗಳು, ಬೂತ್ ಅಧ್ಯಕ್ಷರುಗಳು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಮಿಕ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಎಸ್ಟಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಓಬಿಸಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಬಿಎಲ್ಎಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.