ವೀರಾಜಪೇಟೆ, ಜೂ. ೨೫: ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣ ಕೈಗಾರಿಕಾ ವಿಭಾಗದ (ಖಾಗ್ರಾ) ವತಿಯಿಂದ ೨೦೨೫-೨೬ನೇ ಸಾಲಿಗೆ ಮಂಜೂರಾದ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವಿವಿಧ ವಿದ್ಯುತ್ ಚಾಲಿತ ಉಪಕರಣಗಳ ವಿತರಣಾ ಕಾರ್ಯಕ್ರಮ ವೀರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಅರ್ಹ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಸಲಕರಣೆಗಳನ್ನು ವಿತರಿಸಿದರು. ಈ ಉಪಕರಣಗಳು ಗ್ರಾಮೀಣ ಭಾಗದ ಕುಶಲಕರ್ಮಿಗಳ ಆರ್ಥಿಕ ಸಬಲೀಕರಣಕ್ಕೆ ಮತ್ತು ಅವರ ವೃತ್ತಿ ಬದುಕಿಗೆ ಆಸರೆಯಾಗಲಿ ಎಂದು ಈ ಸಂದರ್ಭದಲ್ಲಿ ಹಾರೈಸಲಾಯಿತು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಆರ್.ಕೆ. ಸಲಾಮ್ ಹಾಗೂ ಪುರಸಭೆಯ ಮಾಜಿ ಸದಸ್ಯರುಗಳಾದ ರಾಫಿ ಮತ್ತು ಅತಿಫ್ ಉಪಸ್ಥಿತರಿದ್ದರು.

ಇವರೊಂದಿಗೆ ಪ್ರಮುಖ ಪಕ್ಷದ ಮುಖಂಡರುಗಳಾದ ಸೂರಜ್ ಹೊಸೂರು, ಕಲಿಯಂಡ ಸಂಪನ್ ಅಯ್ಯಪ್ಪ, ಅಪ್ರು ರವೀಂದ್ರ, ಮಚ್ಚಾರಂಡ ಕಿರಣ್, ಬಟ್ಟಕಾಳಂಡ ರಾಜ, ಸೇರಿದಂತೆ ಸಂಬAಧಪಟ್ಟ ಇಲಾಖೆಯ ಉನ್ನತಾಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.