ಗೋಣಿಕೊಪ್ಪಲು, ಜೂ. ೨೫: ಪೊನ್ನಂಪೇಟೆ ತಾಲೂಕಿನ ಹಾತೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಹಾತೂರು ಪ್ರೌಢಶಾಲೆಯ ೨೫೦ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ, ದಾನಿಗಳಾದ ಹರಪಳ್ಳಿ ರವೀಂದ್ರ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಿಸಿದರು.

ಈ ವೇಳೆ ಮಾತನಾಡಿದ ಹರಪಳ್ಳಿ ರವೀಂದ್ರ, ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಸಾಧಿಸಲು ಶ್ರಮವಹಿಸಿ ಪ್ರಯತ್ನಪಡಬೇಕು, ಸಿಗುವ ಅವಕಾಶಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಹಾತೂರು ಒಕ್ಕಲಿಗರ ಸಂಘದ ಅಧ್ಯಕ್ಷ ಹೆಚ್.ಜಿ. ಅನಿಲ್ ಕುಮಾರ್, ಪೊನ್ನಂಪೇಟೆ ತಾಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ, ಹಾತೂರು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಹೆಚ್.ಡಿ. ಶ್ರೀನಿವಾಸ್, ಹಾತೂರು ಒಕ್ಕಲಿಗರ ಸಂಘದ ಉಪಾಧ್ಯಕ್ಷ ವಿ.ಬಿ. ಉದಯ, ದೊಡ್ಡಮನೆ ಕೀರ್ತಿ ಕಿರಣ್, ಕಣ್ಣಂಗಾಲ ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ಬೈರಂಬಾಡ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಕಿರಣ್, ಈಶ್ವರ್, ಸುರೇಶ್, ಹಾತೂರು ಗ್ರಾಮದ ಹೆಚ್.ಬಿ. ಸುಮಿತ್ರ, ವಿ.ಆರ್. ಸುಮತಿ, ಹೆಚ್.ಎಸ್. ರೇಷ್ಮಾ, ವಿ.ಎಂ. ಶಿಲ್ಪ, ಕಾವ್ಯ ಮಂಜು, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮಾಲಿನಿ ಬಿ., ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಲಮಣಿ ಸೇರಿದಂತೆ, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಒಕ್ಕಲಿಗ ಯುವ ವೇದಿಕೆ ಪೊನ್ನಂಪೇಟೆ-ವೀರಾಜಪೇಟೆ ತಾಲೂಕು ಅಧ್ಯಕ್ಷ ವಿ.ಜಿ. ಮಧುಸೂದನ್ ಕಾರ್ಯಕ್ರಮದಲ್ಲಿ ಹಾಜರಿದ್ದರು.