ಕುಶಾಲನಗರ, ಜೂ. ೨೫: ಅಪ್ರಾಪ್ತ ಬಾಲಕನನ್ನು ಬಲವಂತವಾಗಿ ಮತಾಂತರ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಬಾಲಕನ ತಾಯಿ ಸಜಿತ ಎಂಬಾಕೆಯನ್ನು ಕುಶಾಲನಗರ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬAಧಿಸಿದAತೆ ಮಹಿಳೆಯ ಪತಿ ರಾಜೀವ್ ಎಂಬವರು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಆಕೆಯನ್ನು ಕೇರಳದಿಂದ ಕರೆತಂದು ವಿಚಾರಣೆಗೊಳಪಡಿಸಿ ಮಗನನ್ನು ಬಲವಂತಾಗಿ ಮತಾಂತರ ಮಾಡಿದ ಅಪರಾಧಕ್ಕಾಗಿ ಬಂಧಿಸಿದ್ದಾರೆ. ಮತಾಂತರ ಪ್ರಕರಣದಲ್ಲಿ ಪಾಲ್ಗೊಂಡ ಇಬ್ಬರು ಪ್ರಮುಖ ಆರೋಪಿಗಳಾದ ಮೊಹಮ್ಮದ್ ಸಲೀಂ ಮತ್ತು ಜಲೀಲ್ ಎಂಬುವರನ್ನು ಈ ಹಿಂದೆ ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು. ಪ್ರಕರಣದ ಬಗ್ಗೆ ಕುಶಾಲನಗರ ಟೌನ್ ಠಾಣಾಧಿಕಾರಿ ಹಾಗೂ ಪ್ರಕರಣದ ತನಿಖಾಧಿಕಾರಿಯಾಗಿರುವ ಪ್ರದೀಪ್ ಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು ಹೆಚ್ಚಿನ ವಿಚಾರಣೆಗೆ ಕೇರಳಕ್ಕೆ ತೆರಳಿ ಈ ಪ್ರಕರಣದಲ್ಲಿ ಪಾಲ್ಗೊಂಡ ಆರೋಪಿಗಳ ಮಾಹಿತಿ ಸಂಗ್ರಹಿಸಿ ಕ್ರಮ ಕೈಗೊಳ್ಳುವ ಸಿದ್ಧತೆ ನಡೆದಿದೆ.

ಈ ಪ್ರಕರಣಕ್ಕೆ ಸಂಬAಧಿಸಿದAತೆ ಜಿಲ್ಲೆಯ ಹಿಂದೂಪರ ಸಂಘಟನೆಗಳು ಮತ್ತು ವಿವಿಧ ಸಮುದಾಯದ ಸಂಘಟನೆಗಳ ಪ್ರಮುಖರು ತಾ. ೩೦ ರಂದು ಘಟನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಇಂತಹ ಘಟನೆಗಳು ಮರುಕಳಿಸುವಂತೆ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಆರೋಪಿ ಕುಶಾಲನಗರ ಕಾವೇರಿ ನಿಸರ್ಗಧಾಮದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದು, ಪ್ರಕರಣದ ಮಾಹಿತಿ ಹೊರ ಬರುತ್ತಿದ್ದ ಬೆನ್ನಲ್ಲೇ ವಾಣಿಜ್ಯ ಸಂಕೀರ್ಣದ ಅಂಗಡಿ ಮಳಿಗೆಯನ್ನು ತಾ. ೧೪ರಿಂದ ತೆರವುಗೊಳಿಸಿ ಬಾಡಿಗೆದಾರ ಮೊಹಮ್ಮದ್ ಸಲೀಂ ಎಂಬಾತನ ಒಪ್ಪಂದ ಪತ್ರವನ್ನು ರದ್ದುಗೊಳಿಸಲಾಗಿದೆ ಎಂದು ಕಟ್ಟಡ ಮಾಲೀಕರಾದ ಅಬ್ದುಲ್ ಸಲಾಂ ರಾವುತರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.